ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಘೋಷಣೆ ಬೆಳಗ್ಗೆ 11 ಗಂಟೆಗೆ ಅಂತಿಮ ಸುತ್ತಿನ ಮಹತ್ವದ ಸಭೆಯಲ್ಲಿ ತೀರ್ಮಾನ
News

ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಘೋಷಣೆ ಬೆಳಗ್ಗೆ 11 ಗಂಟೆಗೆ ಅಂತಿಮ ಸುತ್ತಿನ ಮಹತ್ವದ ಸಭೆಯಲ್ಲಿ ತೀರ್ಮಾನ

May 17, 2023

ನವದೆಹಲಿ: ಪ್ರತಿಪಕ್ಷದ ನಾಯಕ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿ ದಿದ್ದು, ಕರ್ನಾಟಕದ ಮುಂದಿನ ಮುಖ್ಯ ಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಹೈ ಕಮಾಂಡ್ ಇನ್ನೂ ಚರ್ಚೆ ನಡೆಸುತ್ತಿದೆ.

ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರು ಸಿದ್ದ ರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆ ಒನ್ ಟು ಒನ್ ಸಭೆ ನಡೆಸಿ, ಇಬ್ಬರು ನಾಯಕರ ವಾದವನ್ನು ಆಲಿಸಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗೆ ಅಂತಿಮ ಸುತ್ತಿನ ಸಭೆ ನಡೆ ಯಲಿದ್ದು, ಇದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವ ಕುಮಾರ್ ಭಾಗಿ ಯಾಗಲಿದ್ದಾರೆ. ಮೂಲಗಳ ಪ್ರಕಾರ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚಿಸಿದ ನಂತರ ಖರ್ಗೆ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯ ಕರ್ನಾಟಕ ಸಿಎಂ ಸ್ಥಾನದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಅಧ್ಯಕ್ಷರು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಾಕಷ್ಟು ವಿಚಾರ ಚರ್ಚಿಸಿದ್ದಾರೆ.

ಬುಧವಾರ ರಾಹುಲ್, ಸೋನಿಯಾ ಗಾಂಧಿ ಅವರೊಂದಿಗೆ ಸಮಾಲೋಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ನಾಯಕನ ಆಯ್ಕೆ ಕುರಿತಂತೆ ಸುದೀರ್ಘ ಸಭೆ ನಡೆಸುತ್ತಿದ್ದು, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಸಮಾಲೋಚನೆ ಮಾಡಿದ್ದಾರೆ.

ನಾಯಕನ ಆಯ್ಕೆ ಕಗ್ಗಂಟನ್ನು ಬಿಡಿಸಲು ಖರ್ಗೆ, ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರ ಜೊತೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಸರತ್ತುಗಳ ನಂತರ ಅಂತಿಮ ನಿರ್ಧಾರಗಳನ್ನು ಸೋನಿಯಾಗಾಂಧಿ ಅವರ ಅಂಗಳಕ್ಕೆ ಹಾಕಿದ್ದು, ಅವರು ಯಾವುದೇ ಸಂದರ್ಭದಲ್ಲಿ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ. ಮೇ ಹದಿನೇಳರ ಬುಧವಾರ ಸರ್ಕಾರ ರಚನೆ ಸಂಬಂಧ ಹಕ್ಕನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಮ್ಮುಖದಲ್ಲಿ ಮಂಡಿಸಲಿರುವ ಕಾಂಗ್ರೆಸ್ ನಿಯೋಗ ನೂತನ ಮುಖ್ಯಮಂತ್ರಿಗಳ ಪ್ರತಿಜ್ಞಾ ವಿಧಿ ಸಮಾರಂಭ ನಡೆಸಲು ಪತ್ರ ನೀಡಲಿದೆ. ಸಿಎಲ್‍ಪಿ ನಾಯಕ ಸ್ಥಾನಕ್ಕೆ ಪೈಪೆÇೀಟಿ ನಡೆಸಿರುವ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ತಮ್ಮನ್ನು ಏತಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂದು ಸಮರ್ಥನೆ ಮಾಡಿಕೊಂಡಿದ್ದಾರೆ.

Translate »