ಇಂದು ಕಾಲೇಜು ವಿದ್ಯಾರ್ಥಿಗಳ ಟೆನಿಕಾಯ್ಟ್ ಪಂದ್ಯಾವಳಿ ಉದ್ಘಾಟನೆ
ಚಾಮರಾಜನಗರ

ಇಂದು ಕಾಲೇಜು ವಿದ್ಯಾರ್ಥಿಗಳ ಟೆನಿಕಾಯ್ಟ್ ಪಂದ್ಯಾವಳಿ ಉದ್ಘಾಟನೆ

October 16, 2018

ಚಾಮರಾಜನಗರ:  ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪ್ರಾಂಶುಪಾಲರ, ಉಪನ್ಯಾಸಕರ, ಬೋಧಕೇತರ ಸಂಘಟನೆಗಳ ಆಶ್ರಯದಲ್ಲಿ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಟೆನಿಕಾಯ್ಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಅ.16 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜೆ ಎಸ್ ಎಸ್ ಮಹಿಳಾ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಾಜಿ ಸಚಿವ ಎನ್. ಮಹೇಶ್ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾ ಯತ್ ಅಧ್ಯಕ್ಷರಾದ ಶಿವಮ್ಮ ಅವರು ಧ್ವಜಾರೋಹಣ ನೆರವೇರಿಸುವರು. ಸಂಸದ ಆರ್. ಧ್ರುವನಾರಾಯಣ ಕ್ರೀಡಾ ಜ್ಯೋತಿ ಸ್ವೀಕರಿಸುವರು. ಶಾಸಕ ಆರ್. ನರೇಂದ್ರ ವಂದನಾ ಸ್ವೀಕಾರ ಮಾಡುವರು. ಶಾಸಕ ಸಿ.ಎಸ್. ನಿರಂಜನ ಕುಮಾರ್ ತಂಡಗಳ ಪರಿಚಯ ಮಾಡುವರು. ಶಾಸಕರಾದ  ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗ ರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷ ರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ವಿಶೇಷ ಆಹ್ವಾನಿತ ರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Translate »