ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ
ಮೈಸೂರು

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ

December 18, 2018

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ (ಮಂಗಳ ವಾರ) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಕಾಂಗ್ರೆಸ್‍ನ ಶಾಸಕಾಂಗ ಪಕ್ಷದ ನಾಯಕರೂ ಆಗಿ ರುವ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ತಿಳಿಸಿದ್ದಾರೆ.

ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬರುವುದಿಲ್ಲ. ಮುಂದೊಂದು ದಿನ ಕಾಂಗ್ರೆಸ್-ಜೆಡಿಎಸ್ ಜಂಟಿ ಸಭೆ ನಡೆಸಿದಾಗ ಅವರನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದ ಸಿದ್ದ ರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಜೊತೆಗೆ 30 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಹಾಗೂ 8ರಿಂದ 10 ಸಂಸದೀಯ ಕಾರ್ಯದರ್ಶಿಗಳ ನೇಮ ಕವೂ ನಡೆಯಲಿದೆ ಎಂದು ತಿಳಿಸಿ ದರು. ಕಾಂಗ್ರೆಸ್ ಪಾಳೆಯದಲ್ಲಿ ಅಧಿ ಕಾರಕ್ಕೆ ಸಂಬಂಧಿಸಿದಂತೆ ಉತ್ತರ ಕರ್ನಾ ಟಕ ಮತ್ತು
ದಕ್ಷಿಣ ಕರ್ನಾಟಕ ಎಂದು ಉಂಟಾಗಿರುವ ಗೊಂದಲ ನಿವಾರಣೆ, ಸರ್ಕಾರ ಮತ್ತು ಮುಖ್ಯಮಂತ್ರಿಗಳ ಮಧ್ಯೆ ಎದ್ದಿರುವ ಅಸಮಾಧಾನಕ್ಕೆ ತೆರೆ ಎಳೆಯುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ. ಈಗಾಗಲೇ ಉತ್ತರ ಕರ್ನಾಟಕದ ಕೆಲ ಅಸಮಾಧಾನಿತ ಶಾಸಕರು ರಹಸ್ಯ ಸಭೆ ನಡೆಸಿರುವ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನ ಪಡಿಸುವ ಸಲುವಾಗಿ ಸಿದ್ದರಾಮಯ್ಯ ನಾಳೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದೇ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಾಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಈ ಔತಣ ಕೂಟಕ್ಕೆ ಅಸಮಾಧಾನಿತರಾಗಿರುವ ಜಾರಕಿಹೊಳಿ ಸಹೋದರರನ್ನು ಕೂಡ ಆಹ್ವಾನಿಸಲಾಗಿದೆ.

Translate »