ಇಂದು ಜಾರಕಿಹೊಳಿ ಸಹೋದರರು, ಲಕ್ಷ್ಮೀ ಹೆಬ್ಬಾಳ್ಕರ್ ಬಲ ಪ್ರದರ್ಶನದ ಕ್ಲೈಮ್ಯಾಕ್ಸ್
ಮೈಸೂರು

ಇಂದು ಜಾರಕಿಹೊಳಿ ಸಹೋದರರು, ಲಕ್ಷ್ಮೀ ಹೆಬ್ಬಾಳ್ಕರ್ ಬಲ ಪ್ರದರ್ಶನದ ಕ್ಲೈಮ್ಯಾಕ್ಸ್

September 7, 2018

ಬೆಂಗಳೂರು: ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾ ವಣೆಗೆ ಸಂಬಂಧಿಸಿ ದಂತೆ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡು ವಿನ ಬಲಾಬಲ ಪ್ರದ ರ್ಶನ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ನಾಳೆ ನಾನಾ ನೀನಾ ಎಂಬುದು ನಿರ್ಧಾರವಾಗಲಿದೆ. ಈ ಮಧ್ಯೆ ರಾಜ್ಯದ ಮೈತ್ರಿ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಜಾರಕಿಹೊಳಿ ಸಹೋ ದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಜಟಾಪಟಿಗೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಂದಾಗಿದೆ.

ನವದೆಹಲಿಯಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬೆಳಗಾವಿ ಕಾಂಗ್ರೆಸ್ ನಾಯಕರ ವಿವಾದವನ್ನು ವರಿಷ್ಠರ ಗಮನಕ್ಕೆ ತಂದಿದ್ದು, ಅವರ ಸೂಚನೆ ಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಂಪ ರ್ಕಿಸಿ, ಸಂಯಮ ಕಾಯ್ದುಕೊಳ್ಳುವಂತೆ ತಿಳಿಸಿದ್ದಾರೆ.

ಮತ್ತೊಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬೆಳಗಾವಿ ಕಾಂಗ್ರೆಸ್ ನಾಯಕರ ಬಿಕ್ಕಟ್ಟು ಬಗೆಹರಿ ಸಲು ಕಾರ್ಯ ಪ್ರವೃತ್ತರಾಗಿದ್ದಾರೆ. ಬೆಳಗಾವಿ ಜಿಲ್ಲಾ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಸಂಬಂಧ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಬಣಗಳ

ನಡುವೆ ವೈಷಮ್ಯ ಏರ್ಪಟ್ಟಿತ್ತು. ಈಗ ಎರಡೂ ಬಣಗಳು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿವೆ. ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ಬಣ ಪ್ರಾಬಲ್ಯ ಸಾಧಿಸಿದ್ದು, ಒಂದು ವೇಳೆ ನಾಳೆ ನಡೆಯಲಿರುವ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಣದ ಕೈ ಮೇಲಾದರೆ ಸತೀಶ್ ಜಾರಕಿಹೊಳಿ ರಾಜ್ಯ ಮೈತ್ರಿ ಸರ್ಕಾರಕ್ಕೆ ಮುಳ್ಳಾಗುವ ಸಾಧ್ಯತೆಯಿದೆ. ಈಗಾಗಲೇ ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಬೆಂಬಲಕ್ಕೆ ನಿಂತಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಒಂದು ವೇಳೆ ಪಿಎಲ್‍ಡಿ ಬ್ಯಾಂಕ್ ವಿಷಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕೈ ಮೇಲಾದರೆ ಸಹಜವಾಗಿ ಜಾರಕಿಹೊಳಿ ಸಹೋದರರು ರಾಜ್ಯದ ಮೈತ್ರಿ ಸರ್ಕಾರಕ್ಕೆ ಕಂಟಕವಾಗುವುದರಲ್ಲಿ ಸಂಶಯವೇ ಇಲ್ಲ ಎನ್ನಲಾಗುತ್ತಿದೆ.

ಇದೆಲ್ಲದರ ನಡುವೆ ಕಾಂಗ್ರೆಸ್ ವಿದ್ಯಮಾನವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ, ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಂಡು ಮತ್ತೆ ಅಧಿಕಾರ ಹಿಡಿಯಲು ಹುನ್ನಾರ ನಡೆಸುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

Translate »