ಮೈಸೂರು, ನ.2- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನವೆಂಬರ್ 3ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳ ಲಾಗಿದ್ದು, ಮೊಹಮ್ಮದ್ ಸೇಠ್ ಬ್ಲಾಕ್, ಗಾಂಧಿನಗರ, ಅಲ್‍ಅನ್ಸ್ ಆಸ್ಪತ್ರೆ, ಜೆ.ಪಿ. ಪ್ಯಾಲೇಸ್, ಕರ್ನಾಟಕ ಪೊಲೀಸ್ ಅಕಾಡೆಮಿ, ಸಬ್ ಅರ್ಬನ್ ಬಸ್ ಸ್ಟ್ಯಾಂಡ್, ಬೆಂಗಳೂರು-ನೀಲಗಿರಿ ರಸ್ತೆ, ದಾವೂದ್‍ಖಾನ್ ರಸ್ತೆ, ಅಶೋಕ ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ನ.4ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಎನ್.ಆರ್.ಮೊಹಲ್ಲಾ, ಬಡಮಖಾನ್, ಸುಭಾಷ್‍ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಜೆ.ಎಸ್.ಎಸ್. ಬಡಾವಣೆ 2ನೇ ಹಂತ, ಯಾಂದಳ್ಳಿ, ವಸಂತನಗರ, ನಾಡನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.