ಇಂದು ವೈಕುಂಠ ಏಕಾದಶಿ
ಮೈಸೂರು

ಇಂದು ವೈಕುಂಠ ಏಕಾದಶಿ

January 13, 2022

ಮೈಸೂರು,ಜ.12(ಆರ್‍ಕೆ)- ಕೋವಿಡ್ ಸೋಂಕು ಉಲ್ಬಣವಾಗುತ್ತಿರುವುದ ರಿಂದ ನಾಳೆ (ಜ.13) ನಡೆಯಲಿರುವ ವೈಕುಂಠ ಏಕಾದಶಿ ಧಾರ್ಮಿಕ ಕೈಂಕರ್ಯದಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅವಕಾಶವಿಲ್ಲದಂತಾಗಿದೆ.

ಮೈಸೂರಿನ ಕೆಆರ್‍ಎಸ್ ರಸ್ತೆಯ ಲ್ಲಿರುವ ವಿ.ವಿ.ಮೊಹಲ್ಲಾದ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನ ಹಾಗೂ ಕಾಳಿದಾಸ ರಸ್ತೆಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಗಳಿಗೆ ಗುರುವಾರ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸ ಲಾಗಿದೆ. ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವೆಂಕಟೇಶ್ವರ ಹಾಗೂ ಶ್ರೀ ಲಕ್ಷ್ಮೀ ನರ ಸಿಂಹಸ್ವಾಮಿ ದೇವಸ್ಥಾನದಲ್ಲಿ ಅರ್ಚ ಕರು ಮಾತ್ರ ಪೂಜೆ ನೆರವೇರಿಸುವರು.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದ್ದು, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ. ಕೋವಿಡ್-19 ಮಾರ್ಗಸೂಚಿಯನ್ನು ಪಾಲಿಸಿ ವೈಕುಂಠ ಏಕಾದಶಿ ಪೂಜೆ, ಧಾರ್ಮಿಕ ಕೈಂಕರ್ಯ ನಡೆಸಲಾಗುವುದು ಎಂದು ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಪಿ.ಎಸ್.ಭರ ತೇಶ ‘ಮೈಸೂರು ಮಿತ್ರ’ನಿಗೆ ತಿಳಿಸಿದರು.

ಅದೇ ರೀತಿ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೂ ಗುರುವಾರ ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಜಯ ಲಕ್ಷ್ಮೀಪುರಂ ಠಾಣೆ ಇನ್‍ಸ್ಪೆಕ್ಟರ್ ಪೂಣಚ್ಚ ತಿಳಿಸಿದ್ದಾರೆ. ಕೊರೊನಾ ಸೋಂಕು ನಿಯಂ ತ್ರಿಸಲು ಜಿಲ್ಲಾಡಳಿತದಿಂದ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.

Translate »