ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಮೈಸೂರು

ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

September 27, 2018

ಮೈಸೂರು:  ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಸೆ.27ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಡೆಯಲಿದೆ. ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್, ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು. ಮೈಸೂರು ರಾಜವಂಶಸ್ಥ ರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವರ್ಚುಯಲ್ ರಿಯಾಲಿಟಿಗೆ ಚಾಲನೆ ನೀಡುವರು. ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ ನಜಿûೀರ್ ಅಹಮದ್, ಸಂಸದರಾದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ್, ಶಾಸಕರಾದ ಎ.ಹೆಚ್.ವಿಶ್ವನಾಥ್, ಮರಿತಿಬ್ಬೇ ಗೌಡ, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನ, ಕೆ.ವಿ.ನಾರಾಯಣಸ್ವಾಮಿ, ಕೆ.ಮಹದೇವ, ಎಲ್.ನಾಗೇಂದ್ರ, ಬಿ.ಹರ್ಷವರ್ಧನ್, ಡಾ.ಯತೀಂದ್ರ, ಅಶ್ವಿನ್‍ಕುಮಾರ್, ಅನಿಲ್‍ಕುಮಾರ್, ಜಿಪಂ ಉಪಾಧ್ಯಕ್ಷ ಜಿ.ನಟರಾಜ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪ ರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು ಹಾಗೂ ಇನ್ನಿತರ ಗಣ್ಯರು ಮುಖ್ಯ ಅತಿಥಿ ಗಳಾಗಿ ಭಾಗವಹಿಸುವರು. ಅಂದು ಸಂಜೆ 6.30ರಿಂದ ಸಂಜೆ 9.30 ಗಂಟೆಯವರೆಗೆ ಸಾಂಸ್ಕøತಿಕ ಕಾರ್ಯ ಕ್ರಮಗಳು, ಪೊಲೀಸ್ ಬ್ಯಾಂಡ್ (ಶಾಸ್ತ್ರೀಯ), ಸಂಜೆ 7ರಿಂದ ಸಂಜೆ 8 ಗಂಟೆಯವರೆಗೆ ಅರಮನೆಗೆ ವಿಶೇಷ ದೀಪಾಲಂಕಾರ ವ್ಯವಸ್ಥೆ ಇರುತ್ತದೆ.

Translate »