ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ 44ಕ್ಕೂ ಹೆಚ್ಚು ಯೋಧರು ಹುತಾತ್ಮರಾದ ಹಿನ್ನೆಲೆ ಯಲ್ಲಿ ಉದ್ಭವಿಸಿದ ಪರಿಸ್ಥಿತಿಯನ್ನು ಚರ್ಚಿಸಲು ಭದ್ರತೆ ಕುರಿತ ಸಂಪುಟ ಸಮಿತಿ ನಾಳೆ ಮಹತ್ವದ ಸಭೆ ನಡೆಸಲಿದೆ. ಗುರುವಾರ ಮಧ್ಯಾಹ್ನ ಪುಲ್ವಾಮಾ ಜಿಲ್ಲೆಯಲ್ಲಿ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಿಆರ್‍ಪಿಎಫ್ ಯೋಧರ ಬೆಂಗಾವಲು ವಾಹನಗಳ ಮೇಲೆ ನಡೆದ ಉಗ್ರರ ದಾಳಿಯಲ್ಲಿ 44ಕ್ಕೂ ಹೆಚ್ಚು ಯೋಧರು ಬಲಿದಾನ ಮಾಡಿ ದ್ದಾರೆ. ಪಾಕ್ ಪ್ರಾಯೋಜಿತ ಭಯೋತ್ಪಾದಕ ಸಂಘಟನೆ ಜೈಷ್ ಇ ಮೊಹಮ್ಮದ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಉಗ್ರರ ಹೇಡಿತನದ ಕೃತ್ಯಕ್ಕೆ ದೇಶಾದ್ಯಂತ ಭಾರೀ ಆಕ್ರೋಶ, ಖಂಡನೆ ವ್ಯಕ್ತವಾಗು ತ್ತಿದೆ. ಉರಿ ಉಗ್ರ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿ ಪುಲ್ವಾಮಾದಲ್ಲಿ ಇಂದು ನಡೆದಿದೆ.