ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮೈಸೂರು ಜಿಲ್ಲೆಯಲ್ಲಿ 38989 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿ ಸಂಭವ
ಮೈಸೂರು

ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮೈಸೂರು ಜಿಲ್ಲೆಯಲ್ಲಿ 38989 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿ ಸಂಭವ

July 19, 2021

ಮೈಸೂರು, ಜು.18(ಎಂಟಿವೈ)-ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೊನೆಗೂ ನಾಳೆ(ಸೋಮವಾರ)ಯಿಂದ ಆರಂಭವಾ ಗುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ 237 ಕೇಂದ್ರಗಳಲ್ಲಿ 38,989 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊರೊನಾ 2ನೇ ಅಲೆಯ ತೀವ್ರತೆಯ ನಡುವೆ ಹಲವು ಕಟ್ಟೆಚ್ಚರದ ಕ್ರಮಗಳೊಂದಿಗೆ ರಾಜ್ಯದಾದ್ಯಂತ ಜುಲೈ 19 ಮತ್ತು 22 ರಂದು ಈ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸ ಲಾಗುತ್ತಿದ್ದು, ಮೈಸೂರು ನಗರದಲ್ಲಿ 72, ಗ್ರಾಮೀಣ ಪ್ರದೇಶದಲ್ಲಿ 165 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯಲ್ಲಿ 237 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸ ಲಾಗಿದೆ. 37,474 ರೆಗ್ಯುಲರ್ ವಿದ್ಯಾರ್ಥಿಗಳು, 1081 ಪುನರಾವರ್ತಿತ ವಿದ್ಯಾರ್ಥಿಗಳು, 434 ಸಿಡಬ್ಲ್ಯುಎಸ್‍ಎನ್ ವಿದ್ಯಾರ್ಥಿಗಳು ಒಳಗೊಂಡಂತೆ 38,989 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿಂದ ಲಾಕ್‍ಡೌನ್ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಬಂದು ಮೈಸೂರಿನಲ್ಲೇ ನೆಲೆಸಿದ್ದ ಕೆಲವರು ತವರೂರಿಗೆ ವಾಪಸ್ಸಾಗಿರುವುದರಿಂದ ಹಾಗೂ ಬೇರೆ ಬೇರೆ ಜಿಲ್ಲೆಗಳಲ್ಲಿ ನೆಲೆಸಿದ್ದ ಮೈಸೂರಿಗರು ಹಿಂದಿರುಗಿರುವುದರಿಂದ ಕೆಲವು ವಿದ್ಯಾರ್ಥಿಗಳು ವಾಪಸ್ಸಾಗಿರುವುದ ರಿಂದ ಪರೀಕ್ಷೆ ಬರೆಯಲು ವಿಶೇಷ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಿಂದ 775 ವಿದ್ಯಾರ್ಥಿಗಳು, ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯುತ್ತಿದ್ದರೆ, ಬೇರೆ ಬೇರೆ ಜಿಲ್ಲೆಯಿಂದ ಮೈಸೂರಿಗೆ ಬಂದ 338 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅನಗತ್ಯವಾಗಿ ಓಡಾಟ, ಜೆರಾಕ್ಸ್ ಅಂಗಡಿ ತೆರೆಯುವುದನ್ನು ನಿಷೇಧಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು, ಸ್ವಯಂ ಸೇವಕರು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಜ್ಜಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿ ಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಬರಲು ಸಹಕರಿಸಲಿದ್ದಾರೆ. ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೂ ಮಾಸ್ಕ್ ವಿತರಿಸಲಾಗಿದ್ದು, ಯಾರಾದರೂ ಮಾಸ್ಕ್ ಮರೆತು ಬಂದಿದ್ದರೆ ಪರೀಕ್ಷಾ ಕೇಂದ್ರದ ಬಳಿಯೇ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

Translate »