ನಾಳೆಯಿಂದ 3 ದಿನ ಸಿಇಟಿ
ಮೈಸೂರು

ನಾಳೆಯಿಂದ 3 ದಿನ ಸಿಇಟಿ

August 27, 2021

ಬೆಂಗಳೂರು, ಆ.೨೬- ರಾಜ್ಯದಲ್ಲಿ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು ೫೩೦ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿ.ಇ.ಟಿ.-೨೦೨೧) ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಒಟ್ಟು ೨,೦೧,೮೧೬ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ. ಕೋವಿಡ್ ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆ ಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆ.೨೮ರಂದು ಜೀವಶಾಸ್ತç ಮತ್ತು ಗಣ ತ, ಆ.೨೯ರಂದು ಭೌತಶಾಸ್ತç ಮತ್ತು ರಸಾಯನಶಾಸ್ತç ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಹೊರನಾಡುಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯು ಆ.೩೦ರಂದು ನಿಗದಿಯಾಗಿದೆ. ೫೩೦ ಪರೀಕ್ಷಾ ಕೇಂದ್ರಗಳ ಪೈಕಿ ೮೬ ಕೇಂದ್ರಗಳು ಬೆಂಗಳೂರಿನಲ್ಲಿದ್ದರೆ, ಉಳಿದ ೪೪೪ ವಿವಿಧ ಜಿಲ್ಲೆಗಳಲ್ಲಿವೆ. ಆಯಾ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದಾರೆ ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಪರೀಕ್ಷೆ ನಡೆಯುವ ದಿನಗಳಂದು ಗೃಹ ಇಲಾಖೆಯು ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಲಿದೆ. ಜೊತೆಗೆ ಒಟ್ಟು ೫೩೦ ವೀಕ್ಷಕರು, ೧೦೬೦ ವಿಶೇಷ ಜಾಗೃತ ದಳದ ಸದಸ್ಯರು, ೫೩೦ ಪ್ರಶ್ನೆಪತ್ರಿಕೆ ಪಾಲಕರು, ೮೪೦೯ ಕೊಠಡಿ ಮೇಲ್ವಿಚಾರಕರು ಹಾಗೂ ೨೦,೪೧೫ ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಇದೇ ೩೦ರಂದು ೬ ಸ್ಥಳಗಳಲ್ಲಿ ನಡೆಯಲಿದೆ.

 

Translate »