ಮಡಿಕೇರಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಮಡಿಕೇರಿ ಶಾಖಾ ಕಚೇರಿ ವತಿಯಿಂದ ಕೈಗಾರಿಕಾ ಅಭಿವೃದ್ಧಿ ಸಮಾವೇಶವು ಡಿ.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಹೋಟೆಲ್ ಕೂರ್ಗ್ ಇಂಟರ್ ನ್ಯಾಷನಲ್‍ನಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿ.ಕೆ.ಲಿಂಗರಾಜು, ಬೆಂಗಳೂರಿನ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಪ್ರಧಾನ ಕಚೇರಿಯ ಪ್ರಧಾನ ವ್ಯವಸ್ಥಾಪಕರಾದ ಬಿ.ಸಿ.ಶಿವಪ್ರಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.
