ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಚಾಮರಾಜನಗರ

ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

June 13, 2018

ಚಾಮರಾಜನಗರ : ನಗರದ ಭುವನೇಶ್ವರಿ ವೃತ್ತದಲ್ಲಿ ಇರುವ ಪೇಟೆ ಪ್ರೈಮರಿ ಶಾಲೆ ರಂಗಮಂದಿರದ ಆವರಣದಲ್ಲಿ ಜೂನ್ 14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ವಿಶ್ವ ಸ್ವಯಂಪ್ರೇರಿತ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ವನ್ನು ಆಯೋಜಿಸಲಾಗಿದೆ. ನಗರದ ರೋಟರಿ ಸಿಲ್ಕ್‍ಸಿಟಿ, ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸ್ನೇಹ ಬಳಗ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ.

ಜೂನ್ 14 ರಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅದರಂತೆ ಚಾಮ ರಾಜನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಡನೆ ಅರ್ಥಪೂರ್ಣವಾಗಿ ಆಚರಿಸ ಲಾಗುತ್ತಿದೆ. ಆದ್ದರಿಂದ ನಾಗ ರಿಕರು, ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುವ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ರೋಟರಿ ಸಿಲ್ಕ್‍ಸಿಟಿ ಮಾಜಿ ಅಧ್ಯಕ್ಷ ದೊಡ್ಡರಾಯಪೇಟೆ ಗಿರೀಶ್ ಕೋರಿ ದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.95385 33818ನ್ನು ಸಂಪರ್ಕಿಸಿ.

Translate »