ನಾಳೆ ನಾಡಪ್ರಭು ಕೆಂಪೇಗೌಡ, ಕೆ.ಹೆಚ್.ರಾಮಯ್ಯ ಜನ್ಮ ದಿನಾಚರಣೆ
ಮೈಸೂರು

ನಾಳೆ ನಾಡಪ್ರಭು ಕೆಂಪೇಗೌಡ, ಕೆ.ಹೆಚ್.ರಾಮಯ್ಯ ಜನ್ಮ ದಿನಾಚರಣೆ

September 21, 2018

ಮೈಸೂರು:  ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಸೆ.22ರಂದು ನಾಡಪ್ರಭು ಕೆಂಪೇಗೌಡ ಮತ್ತು ಕೆ.ಹೆಚ್.ರಾಮಯ್ಯ ಜನ್ಮ ದಿನಾಚರಣೆ ಹಾಗೂ ವಿಕಾಸಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಹೆಚ್.ಎಲ್.ಯಮುನಾ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪುರಭವನದಲ್ಲಿ ಏರ್ಪಡಿಸಿರುವ ಸಮಾರಂಭ ವನ್ನು ಅಂದು ಮಧ್ಯಾಹ್ನ 3.30ಕ್ಕೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಕುಮಾರಚಂದ್ರಶೇಖರನಾಥ ಸ್ವಾಮೀಜಿ ಹಾಗೂ ಕುಣಿಗಲ್ ತಾಲೂಕಿನ ಶ್ರೀ ಅರೇಶಂಕರ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು. ಶಾಸಕ ಎಲ್.ನಾಗೇಂದ್ರ, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ವಿಕಾಸಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ವೇಳೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು. ವೇದಿಕೆ ಮಾರ್ಗದರ್ಶಕ ಟಿ.ಎನ್.ನರಸೇಗೌಡ, ಮುಖಂಡ ಸ್ವಾಮಿಗೌಡ ಮತ್ತಿತರರು ಗೋಷ್ಠಿಯಲ್ಲಿದ್ದರು.

Translate »