ನಾಳೆ ಕನಕದಾಸರ ಜಯಂತ್ಯುತ್ಸವ
ಮೈಸೂರು

ನಾಳೆ ಕನಕದಾಸರ ಜಯಂತ್ಯುತ್ಸವ

November 27, 2018

ಮೈಸೂರು: ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ ವತಿಯಿಂದ ನ.28ರಂದು ಶ್ರೀ ಭಕ್ತ ಕನಕದಾಸರ 531ನೇ ಜಯಂತ್ಯುತ್ಸವ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಿಂದ ಸಭಾ ಕಾರ್ಯಕ್ರಮ ನಡೆಯಲಿ ರುವ ಜಗನ್ಮೋಹನ ಅರಮನೆವರೆಗೆ ಶ್ರೀ ಕನಕದಾಸರ ಪ್ರತಿಮೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಪ್ರತಿಷ್ಠಾಪಿಸಲಾಗುವುದು.

ಕೆ.ಆರ್.ವೃತ್ತ, ನ್ಯೂ ಸಯ್ಯಾಜಿರಾವ್ ರಸ್ತೆ, ಚಾಮರಾಜ ಜೋಡಿ ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಡಿ.ದೇವರಾಜ ಅರಸು ರಸ್ತೆ, ಜೆಎಲ್‍ಬಿ ರಸ್ತೆ, ರಮಾವಿಲಾಸ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ.ಜಗನ್ಮೋಹನ ಅರಮನೆಯಲ್ಲಿ ಅಂದು ಸಂಜೆ 4ಕ್ಕೆ, ಶ್ರೀ ಕಾಗಿನೆಲೆ ಕನಕಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯ ಲಿರುವ ಸಭಾ ಕಾರ್ಯಕ್ರಮವನ್ನು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಮಾಜಿ ಸಚಿವ ಎ.ಹೆಚ್.ವಿಶ್ವನಾಥ್ ಉದ್ಘಾಟಿಸಲಿದ್ದಾರೆ. ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಶಾಸಕರಾದ ತನ್ವೀರ್‍ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಎಲ್.ನಾಗೇಂದ್ರ, ಆರ್.ಧರ್ಮ ಸೇನ, ಮಾಜಿ ಶಾಸಕ ವಾಸು ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ನೂತನ ಮೇಯರ್ ಪುಷ್ಪಲತಾ ಜಗನ್ನಾಥ್, ಉಪಮೇಯರ್ ಶಫಿ ಅಹಮ್ಮದ್, ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ, ನಗರ ಪಾಲಿಕೆ ಸದಸ್ಯರಾದ ಜೆ.ಗೋಪಿ, ಪುಟ್ಟನಿಂಗಮ್ಮ, ನಿರ್ಮಲ ಹರೀಶ್, ನಮ್ರತಾ ರಮೇಶ್, ಜ್ಯೋತಿಷಿ ಮಂಜುನಾಥ್ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ಎಂ.ರಾಜು ಅವರನ್ನು ಸಮಾರಂಭದಲ್ಲಿ ಅಭಿನಂದಿಸಲಾಗುವುದು. ಅದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ಹಾಗೂ ಪ್ರಬಂಧ ಸ್ಪರ್ಧೆ ವಿಜೇತರನ್ನು ಪುರಸ್ಕರಿಸಲಾಗುವುದು. ಬಳಿಕ ಪ್ರಸಿದ್ಧ ಗಾಯಕ ವಿದ್ವಾನ್ ಶಶಿಧರ ಕೋಟೆ ಅವರು ದಾಸರ ಪದಗಳನ್ನು ಪ್ರಸ್ತುತಪಡಿಸಲಿದ್ದಾರೆ.

Translate »