ನಾಳೆ ನೂತನ ಪರಿಷತ್ ಸದಸ್ಯರ ಪ್ರಮಾಣವಚನ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ
ಮೈಸೂರು

ನಾಳೆ ನೂತನ ಪರಿಷತ್ ಸದಸ್ಯರ ಪ್ರಮಾಣವಚನ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ

June 17, 2018

ಬೆಂಗಳೂರು: ವಿಧಾನ ಪರಿಷತ್ ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಹಾಗೂ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಲಿದೆ.

ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‍ನ 11 ಸದಸ್ಯ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿರುವ ಅರ ವಿಂದಕುಮಾರ್ ಅರಳಿ, ಸಿ.ಎಂ ಇಬ್ರಾಹಿಂ, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಎಸ್.ಎಲ್.ಧರ್ಮೇಗೌಡ, ಕೆ.ಪಿ. ನಂಜುಂಡಿ ವಿಶ್ವಕರ್ಮ, ಬಿ.ಎಂ.ಫಾರೂಕ್, ರಘುನಾಥ್‍ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್‍ಕುಮಾರ್ ಅವರು ಜೂನ್ 18ರಂದು ವಿಧಾನಪರಿಷತ್ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿ ಸಲಿದ್ದಾರೆ. ನೂತನ ಸದಸ್ಯರಿಗೆ ಅಧಿ ಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಬೋಧಿಸಲಿದ್ದಾರೆ.

Translate »