ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ
ಮಂಡ್ಯ

ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ

June 26, 2018

ಮಂಡ್ಯ:  ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆವಹಿಸುವರು. ಆದಿಚುಂಚನ ಗಿರಿ ಕ್ಷೇತ್ರದ ಕಾರ್ಯದರ್ಶಿ ಶ್ರೀಪುರುಷೋತ್ತಮನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು.

ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಾಡಪ್ರಭು ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಲಾಮಂದಿರದಲ್ಲಿ ಸಮಾವೇಶಗೊಳ್ಳುವುದು. ಕೆ.ವಿ.ಶಂಕರೇ ಗೌಡ ಬಿ.ಎಡ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ||ಎಸ್.ಬಿ.ಶಂಕರೇಗೌಡ ಅವರು ಉಪನ್ಯಾಸ ನೀಡುವರು.

Translate »