ನಾಳೆ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು

ನಾಳೆ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

August 4, 2018

ಮೈಸೂರು:  ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಚಿವ, ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೈಸೂರು ಜಿಲ್ಲಾ ಗಾಣಿಗ ಸಂಘದಿಂದ ಆ.5ರಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಉಮೇಶ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಸಾ.ರಾ.ಮಹೇಶ್, ಎಂಎಲ್‍ಸಿ ಮರಿತಿಬ್ಬೇಗೌಡ ಅವರು ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಸಂಸದ ಪ್ರತಾಪ್‍ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ತನ್ವೀರ್‍ಸೇಠ್, ಎಲ್.ನಾಗೇಂದ್ರ, ಡಾ.ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ದನ್, ಅನಿಲ್ ಚಿಕ್ಕಮಾದು, ಅಶ್ನಿನ್‍ಕುಮಾರ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ವಿ.ಕೃಷ್ಣಶೆಟ್ಟಿ, ಬಾಲಕೃಷ್ಣ, ಮಹದೇವ್, ಹೇಮಂತ್‍ಕುಮಾರ್, ಹರೀಶ್ ಉಪಸ್ಥಿತರಿದ್ದರು.

Translate »