ನಾಳೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಕೊಡಗು

ನಾಳೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

September 16, 2018

ಮಡಿಕೇರಿ: ವಿರಾಜಪೇಟೆಯ ಮಾಜಿ ಸೈನಿಕರ ಸಹಕಾರ ಸಂಘ ನಿಯಮಿತ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಸೆ.17 ರಂದು ಬೆ.10.30ಕ್ಕೆ ಅಮರ ಜವಾನ ಸ್ಮಾರಕದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಶಾಸಕ ಕೆ.ಜಿ.ಬೋಪಯ್ಯ, ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ಬ್ರಿಗೇಡಿಯರ್ ಮನೆಯಪಂಡ ಎಂ.ದೇವಯ್ಯ, ಚೇಂದ್ರಿಮಾಡ ಕೆ.ನಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯ ಕ್ರಮ ನಡೆಯಲಿದೆ. ಸೈನಿಕ ಮತ್ತು ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕರ್ನಲ್ ಗೀತ ಮಹಾಬಲ ಶೆಟ್ಟಿ, ವಿ.ಪೇಟೆ ತಾಲೂಕಿನ ತಹಶೀಲ್ದಾರರಾದ ಆರ್.ಗೋವಿಂದ ರಾಜು, ವಿರಾಜಪೇಟೆ ಉಪ ಅಧೀಕ್ಷಕರಾದ ನಾಗಪ್ಪ, ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ಶ್ರೀ ಸ್ವಾಮಿ ಭೋಧ ಸ್ವರೂಪ ನಂದಾಜೀ, ಸಂತ ಅನ್ನಮ್ಮ ದೇವಾ ಲಯದ ರೆವರೆಂಡ್ ಫಾದರ್ ಮದುಲೈ ಮುತ್ತು, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರಾದ ದುದ್ಯಂಡ ಸೂಫಿ ಇತರರು ಪಾಲ್ಗೊಳ್ಳಲಿದ್ದಾರೆ.

Translate »