ಮಡಿಕೇರಿ: ನ್ಯಾಯಾಲಯದ ವಿವಿಧ ಹಂತದಲ್ಲಿರುವ ಹಿರಿಯ ನಾಗರಿ ಕರ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಏ.25 ರಂದು ವಿಶೇಷ ಲೋಕ ಅದಾಲತ್ ನಡೆಯಲಿದ್ದು, ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್ ಕೋರಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಸಭಾಂ ಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಹಿರಿಯ ನಾಗರಿಕರು ನ್ಯಾಯಾಲ ಯಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇ ಶದಿಂದ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಬಹುದಾದ ಹಿರಿಯ ನಾಗರಿ ಕರ ಪ್ರಕರಣಗಳನ್ನು ವಿಶೇಷ ಲೋಕ ಅದಾ ಲತ್ ಮೂಲಕ ಹೈಕೋರ್ಟ್ ನಿರ್ದೇಶ ನದಂತೆ ಬಗೆಹರಿಸಲು ಪ್ರಯತ್ನಿಸಲಾ ಗುತ್ತದೆ ಎಂದು ಡಿ.ಪವನೇಶ್ ಹೇಳಿದರು.
ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪ್ರತೀ ವರ್ಷದಂತೆ ಈ ಬಾರಿಯೂ ಸಹ ಏ.26 ರಿಂದ ಮೇ 07 ರವರೆಗೆ ಕಾನೂನು ಸಾಕ್ಷರತಾ ರಥ ಜಿಲ್ಲೆಯ ಮೂರು ತಾಲೂ ಕುಗಳಲ್ಲಿ ಸಂಚರಿಸಲಿದ್ದು, ಕಾನೂನಿಗೆ ಸಂಬಂ ಧಿಸಿದಂತೆ ಹಾಡಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾ ಧೀಶರು ವಿವರಿಸಿದರು.
ಮೇ 1 ರಂದು ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗಾಗಿ ಕಾನೂನು ಬಗ್ಗೆ ಮಾಹಿತಿ ನೀಡಲಾಗುವುದು. ಹಾಗೆಯೇ ಮೇ 30 ರಂದು ತಂಬಾಕು ವಿರೋಧಿ ದಿನಾ ಚರಣೆ ಬಗ್ಗೆ ಜಾಗೃತಿ ಮೂಡಿಸಬೇಕಿದ್ದು, ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳು ಕೈಜೋಡಿಸುವಂತೆ ತಿಳಿಸಿದರು.
ಜೂನ್ 5 ರಂದು ಪರಿಸರ ದಿನಾಚ ರಣೆ ಪ್ರಯುಕ್ತ ಶಾಲಾ-ಕಾಲೇಜುಗಳು, ಹಾಸ್ಟೆಲ್‍ಗಳು, ಕಚೇರಿಗಳು ಮತ್ತಿತರ ಪ್ರದೇಶ ಗಳಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯ ಕ್ರಮ ಆಯೋಜಿಸಲು ಉದ್ದೇಶಿಸಲಾ ಗಿದ್ದು, ಸಂಬಂಧಪಟ್ಟ ಇಲಾಖಾಧಿಕಾರಿ ಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಡಿ.ಪವನೇಶ್ ತಿಳಿಸಿದರು.
ನಗರದ ಹೊರವಲಯದಲ್ಲಿ ನಿರ್ಮಾಣ ವಾಗಿರುವ ಹೊಸ ನ್ಯಾಯಾಲಯ ಕಟ್ಟಡದ ಸುತ್ತ ಒಂದು ಸಾವಿರ ಗಿಡ ನೆಡಲು ಉದ್ದೇ ಶಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಏಪ್ರಿಲ್, ಮೇ, ಜೂನ್ ತಿಂಗ ಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜೊತೆ ಗೂಡಿ ನಡೆಸುವಂತಾಗಬೇಕು. ಕಾನೂನು ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಡಿ.ಪವನೇಶ್ ಮನವಿ ಮಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಅವರು ಬಡವರಿಗೆ ಕಾನೂ ನಿನ ಅರಿವು ಮೂಡಿಸುವುದರ ಜೊತೆಗೆ ಆಸ್ತಿ ವಿವಾದ, ವೈವಾಹಿಕ ಸಮಸ್ಯೆ ಮತ್ತಿ ತರ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಿಶೇಷ ಲೋಕ ಅದಾಲತ್ ನಡೆಸಲಾಗು ತ್ತದೆ. ಇದರ ಸದುಪಯೋಗ ಪಡಿಸಿಕೊಳ್ಳು ವಂತಾಗಬೇಕು. ಸಿವಿಲ್ ಮತ್ತು ಕ್ರಿಮಿನಲ್ ಪ್ರಕ ರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಹಿರಿಯ ನಾಗರಿ ಕರು ಮುಂದಾಗಬೇಕಿದೆ ಎಂದರು.
ಮಡಿಕೇರಿ ತಾಲೂಕಿನಲ್ಲಿ 40 ರಿಂದ 50 ಹಿರಿಯ ನಾಗರಿಕರ ಪ್ರಕರಣಗಳನ್ನು ಗುರು ತಿಸಲಾಗಿದೆ. ಈ ಮೂಲಕ ರಾಜೀ ಸಂಧಾ ನದ ಮೂಲಕ ಇತ್ಯರ್ಥಪಡಿಸಲು ಪ್ರಯ ತ್ನಿಸಲಾಗುವುದು ಎಂದರು.
ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ನಡೆಸುವ ಕಾರ್ಯಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗು ವುದು ಎಂದು ತಿಳಿಸಿದರು. ವಕೀಲರ ಸಂಘದ ಉಪಾಧ್ಯಕ್ಷರಾದ ಪ್ರೀತಂ, ಹೆಚ್ಚುವರಿ ಜಿಲ್ಲಾ ಧಿಕಾರಿ ಪಿ.ಶಿವರಾಜು, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ್ ಅವರು ಕಾರ್ಯಕ್ರಮ ಆಯೋಜನೆ ಬಗ್ಗೆ ಹಲವು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಬಿ.ಕೆ.ಮನು, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಸ್ಮಿತಾ, ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಜಿಲ್ಲಾ ಸರ್ಕಾರಿ ವಕೀಲರಾದ ಶ್ರೀಧರ್ ನಾಯರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್, ಬಂಧಿಖಾನೆ ಇಲಾಖೆಯ ಕೃಷ್ಣಮೂರ್ತಿ, ಸರ್ಕಲ್ ಇನ್ಸ್‍ಪೆಕ್ಟರ್ ನಾಗೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಇತರರು ಇದ್ದರು.