ನಾಳೆ ಯೋಧ ನಮನ
ಕೊಡಗು

ನಾಳೆ ಯೋಧ ನಮನ

July 7, 2018

ಮಡಿಕೇರಿ:  ಕೊಡಗು ಯೋಧಾಭಿಮಾನಿ ಬಳಗ ವತಿಯಿಂದ ಮಡಿಕೇರಿ ಕೊಡವ ಸಮಾಜ ಸಹಯೋಗದಲ್ಲಿ ‘ಯಾರಿಗಾಗಿ ನಮ್ಮವರ ಬಲಿದಾನ’ ಯೋಧ ನಮನ ಕಾರ್ಯಕ್ರಮ ಜುಲೈ 8ರಂದು ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ.

ದೇಶರಕ್ಷಣೆಯಲ್ಲಿ ತೊಡಗಿದ್ದಾಗ ಬಲಿದಾನಿ ಗಳಾದ, ಯುದ್ಧ ಮುಂತಾದ ಹೋರಾಟ ದಲ್ಲಿ ಪ್ರಾಣ ಪಣಕ್ಕಿಟ್ಟು ಹೋರಾಡಿದ ವೀರ ಸೈನಿಕರನ್ನು ಸ್ಮರಿಸುವ ಸಲುವಾಗಿ ಈ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್(ನಿ) ಕಂಡ್ರತಂಡ ಸಿ. ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಡಿಸಿ ಪಿ.ಐ.ಶ್ರೀವಿದ್ಯಾ ಉದ್ಘಾ ಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮೇಜರ್ ಜನರಲ್ ಕುಪ್ಪಂಡ ಪಿ. ನಂಜಪ್ಪ, ಕೊಡಗು ಎಸ್ಪಿ ರಾಜೇಂದ್ರ ಪ್ರಸಾದ್ ಪಾಲ್ಗೊಳ್ಳಲಿ ದ್ದಾರೆ. ಆಧ್ಯಾತ್ಮಿಕ ಚಿಂತಕ, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾಜಿಕ ಚಿಂತಕ ಅರ್ಜುನ್ ದೇವಾಲದಕೆರೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Translate »