ಮಡಿಕೇರಿ: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿ ಗಳಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವು ಅಕ್ಟೋಬರ್ 28 ರಂದು ಬೆಳಗ್ಗೆ 9.30ಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂ ಗಣದಲ್ಲಿ ನಡೆಯಲಿದೆ.
16 ವರ್ಷ ವಯಸ್ಸಿನ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ 100 ಮೀ. ಓಟ, 14 ವರ್ಷ ವಯಸ್ಸಿನ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ 400 ಮೀ. ಓಟ, 16 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 40 ವರ್ಷ ಒಳಪಟ್ಟ ವಯ ಸ್ಸಿನ ಪುರುಷ ಮತ್ತು ಮಹಿಳೆಯರಿಗೆ 800 ಮೀ. ಓಟ ಹಾಗೂ 40 ವರ್ಷ ಕ್ಕಿಂತ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಗುಂಡು ಎಸೆತ ಕ್ರೀಡಾ ಕೂಟ ಏರ್ಪಡಿಸಲಾಗಿದೆ. ವಯಸ್ಸಿನ ಬಗ್ಗೆ ದಾಖಲೆ ಪ್ರಮಾಣ ಪತ್ರ ಹೊಂದಿ ರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.