ಮೈಸೂರು: ಗಣರಾಜ್ಯೋತ್ಸವದ ಅಂಗವಾಗಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಜ.26ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕರಿಗೆ ಸನ್ಮಾನ ಹಾಗೂ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಶಿಬಿರಕ್ಕೆ ಇಳೈ ಆಳ್ವಾರ್ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಭಾನುಪ್ರಕಾಶ್ ಶರ್ಮಾ, ಶಾಸಕ ಎಸ್.ಎ.ರಾಮದಾಸ್, ಬಿಜೆಪಿ ಮುಖಂಡರಾದ ಹೆಚ್.ವಿ.ರಾಜೀವ್, ಕೆ.ಆರ್.ಮೋಹನ್‍ಕುಮಾರ್, ಎನ್.ವಿ.ಫಣೀಶ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಬಿಇಓ ಶಿವಕುಮಾರ್, ಡಾ.ಬಿ.ಎನ್.ರವಿ, ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು. ನಾರಾಯಣ ಹೃದಯಾಲಯ ವೈದ್ಯರ ತಂಡವು ಭಾಗಿಯಾಗಿ ಮಧುಮೇಹ, ರಕ್ತದೊತ್ತಡ, ಜಿ.ಆರ್.ಬಿ.ಎಸ್, ಇಸಿಜಿ, ಎಕೋ ಹಾಗೂ ಆಪ್ತ ಸಮಾಲೋಚನೆ ನಡೆಸಲಿದ್ದಾರೆ. ಮಾಹಿತಿಗೆ ಮೊ- 99452 66832, 91416 37888 ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಭಾನುಪ್ರಕಾಶ್ ಶರ್ಮ, ರಘುರಾಂ ವಾಜ ಪೇಯಿ, ಜಿ.ರಮೇಶ್, ಜಯಸಿಂಹ ಶ್ರೀಧರ್, ಅಜಯ್ ಶಾಸ್ತ್ರಿ ಇನ್ನಿತರರು ಇದ್ದರು.