ನಾಳೆ ಅಂಚೆ ಅದಾಲತ್
ಕೊಡಗು

ನಾಳೆ ಅಂಚೆ ಅದಾಲತ್

December 6, 2018

ಮಡಿಕೇರಿ:  ಅಂಚೆ ಅದಾಲತ್ ಸಭೆಯು ಡಿ.7 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ.

ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾಲತ್ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿ.6ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಡಿ.7ರಂದು ನಡೆಯುವ ಸಭೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಭಾಗವಹಿಸ ಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Translate »