ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಮೀಷ್ನರ್ ಡಾ.ಎ.ಎಸ್.ರಾವ್
ಮೈಸೂರು

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಮೀಷ್ನರ್ ಡಾ.ಎ.ಎಸ್.ರಾವ್

September 10, 2018

ಮೈಸೂರು: ತೈಲ ಬೆಲೆ ಏರಿಕೆ ಹಿನ್ನೆಲೆ ನಾಳೆ(ಸೆ.10) ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಮೈಸೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವವರ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ `ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮೈಸೂರು ನಗರ ಮತ್ತು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಯಾವುದೇ ಸಂಘಟನೆಗಳು ಭಾರತ್ ಬಂದ್ ನೆಪದಲ್ಲಿ ಗಲಾಟೆ, ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಎಲ್ಲಾ ಠಾಣೆಯ ಇನ್ಸ್‍ಪೆಕ್ಟರ್‍ಗಳ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾ ಗಿದ್ದು, ಹೆಚ್ಚುವರಿಯಾಗಿ ನಾಲ್ಕು ಕೆಎಸ್‍ಆರ್‍ಪಿ ತುಕಡಿಗಳನ್ನು ನಗರದ ಹೃದಯ ಭಾಗ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

Translate »