ರ್ಯಾಪಿಡ್ ಆ್ಯಂಟಿಬಾಡಿ ಟೆಸ್ಟ್‍ಕಿಟ್ ಮಾರಾಟ ಮಾಡಿದರೆ ಕಠಿಣ ಕ್ರಮ
ಮೈಸೂರು

ರ್ಯಾಪಿಡ್ ಆ್ಯಂಟಿಬಾಡಿ ಟೆಸ್ಟ್‍ಕಿಟ್ ಮಾರಾಟ ಮಾಡಿದರೆ ಕಠಿಣ ಕ್ರಮ

July 19, 2020

ಮೆಡಿಕಲ್ ಸ್ಟೋರ್ಸ್ ಮಾಲೀಕರಿಗೆ ಉಪ ಔಷಧ ನಿಯಂತ್ರಕರ ಎಚ್ಚರಿಕೆ
ಮೈಸೂರು, ಜು. 18(ಆರ್‍ಕೆ)- ಚಿಲ್ಲರೆ ಹಾಗೂ ಸಗಟು ಔಷಧ ಅಂಗಡಿಗಳಲ್ಲಿ ರ್ಯಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್‍ಗಳನ್ನು ಮಾರಾಟ ಮಾಡಬಾರದೆಂದು ಮೈಸೂರು ಪ್ರಾದೇಶಿಕ ಕಚೇರಿಯ ಉಪ ಔಷಧ ನಿಯಂತ್ರಕ ಶ್ರೀಧರ ಸೂಚಿಸಿದ್ದಾರೆ.

ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಸ್ವಯಂ ಪರೀಕ್ಷಿಸಿಕೊಳ್ಳಲು ಮೈಸೂರಲ್ಲಿ ಡಯಾಗ್ನೋಸ್ಟಿಕ್ ಕಿಟ್(ಖಚಿಠಿiಜ ಚಿಟಿಣiboಜಥಿ ಖಿesಣ ಏiಣ)ಗಳನ್ನು ಉಪಯೋಗಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದು ಸರಿಯಾದ ಕ್ರಮವಲ್ಲ. ಈ ಕುರಿತು ಸುತ್ತೋಲೆ ಹೊರಡಿಸಿರುವ ಶ್ರೀಧರ ಅವರು, ಚಿಲ್ಲರೆ, ಸಗಟು ಔಷಧ ವ್ಯಾಪಾರಸ್ಥರು ಸದರಿ ಡಯಾಗ್ನೋಸ್ಟಿಕ್ ಕಿಟ್‍ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಬಾರದೆಂದು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ. ಅವುಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಸೋಂಕಿನ ಲಕ್ಷಣ ಇರುವವರಿಗೆ ಈಗಾಗಲೇ ಜಿಲ್ಲಾಡಳಿತವು ಸ್ವ್ಯಾಬ್ ತೆಗೆದು ಪರೀಕ್ಷೆ ಮಾಡಲು ಸಕಲ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ನಿಯಮಾನು ಸಾರ ಅಧಿಕೃತ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಅವರು ತಿಳಿಸಿದ್ದಾರೆ.

Translate »