ತೆರಕಣಾಂಬಿ ತಾಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಮನವಿ
ಚಾಮರಾಜನಗರ

ತೆರಕಣಾಂಬಿ ತಾಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಮನವಿ

October 26, 2018

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರಕ್ಕೆ ಭಾನುವಾರ ನಡೆಯಲಿರುವ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ನೀಡುವುದರೊಂದಿಗೆ ಜಯಶಾಲಿಯನ್ನಾಗಿ ಸಬೇಕು ಎಂದು ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಹೇಳಿದರು.

ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕಾಂಗ್ರೆಸ್ ಆಯೋ ಜಿಸಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಪತಿ ದಿ.ಹೆಚ್.ಎಸ್. ಮಹದೇವಪ್ರಸಾದ್ ಹಾಗೂ ತಾವು ಕ್ಷೇತ್ರ ವನ್ನು ಮಾದರಿಯಾಗಿಸಲು ಶ್ರಮಿಸಿದ್ದು ತೆರ ಕಣಾಂಬಿಯ ಉಪ ಚುನಾವಣೆಯಲ್ಲಿ ಜನತೆ ಕೈ ಹಿಡಿಯಬೇಕು ಎಂದರು. ಸಹಕಾರ ಸಚಿವ ರಾಗಿದ್ದ ದಿ.ಮಹದೇವಪ್ರಸಾದ್ ಅವಧಿಯಲ್ಲಿ ಕ್ಷೇತ್ರವನ್ನು ಮಾದರಿಯನ್ನಾಗಿಸಲು ಶ್ರಮಿಸಿ ದ್ದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನದಿಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಂತಹ ಶಾಶ್ವತ ಯೋಜನೆ ಜಾರಿಗೆ ತಂದಿದ್ದಾರೆ. ತಮ್ಮ 11 ತಿಂಗಳ ಅವಧಿಯಲ್ಲಿ 200 ಕೋಟಿ ರೂ. ಅನುದಾನ ತಂದಿದ್ದು, ಬಹುತೇಕ ಕಾಮ ಗಾರಿಗಳಿಗೆ ಚಾಲನೆ ನೀಡಲಾಗಿದೆ.
ಹೋಬಳಿ ಕೇಂದ್ರವಾದ ಈ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೆರೆ ಗಳಿಗೆ ನೀರು ತುಂಬಿಸಿದ್ದರು. ಅಲ್ಲದೆ ಗ್ರಾಮಕ್ಕೆ ಸುಸಜ್ಜಿತ ನೂತನ ಬಸ್‍ನಿಲ್ದಾಣ, ಎಪಿಎಂಸಿ ಮಾರುಕಟ್ಟೆ ನಿರ್ಮಾಣ, ಮುರಾರ್ಜಿ ವಸತಿ ಶಾಲೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಐಟಿಐ ಕಾಲೇಜುಗಳ ಮಂಜೂರು ಮಾಡಿಸಿದ್ದರು. ತಮ್ಮ ಅವಧಿಯಲ್ಲಿ ಕೋಟ್ಯಾಂ ತರ ರೂ. ಅನುದಾನ ತಂದು ಕಾಲೇಜು ಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆ ಸಲಾಗುತ್ತಿದೆ ಎಂದರು. ಈ ಉಪ ಚುನಾ ವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ನಾಯ್ಕ ಅವರನ್ನು ಮತದಾರರು ಗೆಲ್ಲಿಸ ಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಂಸದ ಆರ್.ಧ್ರುವನಾರಾ ಯಣ್, ಜಿಪಂ ಅಧ್ಯಕ್ಷೆ ಶಿವಮ್ಮ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್, ಜಿ.ಪಂ ಸದಸ್ಯರಾದ ಕೆ.ಎಸ್. ಮಹೇಶ್, ಅಶ್ವಿನಿ, ಸದಾಶಿವಮೂರ್ತಿ, ಮಾಜಿ ಉಪಾಧ್ಯಕ್ಷ ಪಿ.ಮಹದೇವಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ವೀರ ಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡ ಸೋಗೆಶಿವಬಸಪ್ಪ, ಮಲೆಮಹದೇಶ್ವರಬೆಟ್ಟ ಧರ್ಮದರ್ಶಿಮಂಡಲಿಯ ಮಾಜಿಅಧ್ಯಕ್ಷ ಡಿ.ಎಸ್.ಸಿದ್ದಪ್ಪ, ಎಪಿಎಂಸಿ ಅಧ್ಯಕ್ಷ ಪ್ರಭು ಸ್ವಾಮಿ, ತಾಪಂ ಅಧ್ಯಕ್ಷ ಜಗದೀಶ್ ಮೂರ್ತಿ, ಗ್ರಾಪಂ ಅಧ್ಯಕ್ಷ ಟಿ.ಎಚ್. ಉಮೇಶ್ ಸೇರಿದಂತೆ ಹಲವರು ಇದ್ದರು.

Translate »