ಕೆಟ್ಟು ನಿಂತಿದ್ದ ಟ್ರಾಕ್ಟರ್‍ಗೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಮಂಡ್ಯ

ಕೆಟ್ಟು ನಿಂತಿದ್ದ ಟ್ರಾಕ್ಟರ್‍ಗೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

July 24, 2018

ಪಾಂಡವಪುರ : ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಣಿವೆಕೊಪ್ಪಲು ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ. ಕೆ.ಆರ್.ಪೇಟೆ ತಾಲೂಕಿನ ಬಣ್ಣನಕೆರೆ ಗ್ರಾಮದ ನಿವಾಸಿ ನಾಗೇಶ್ ಎಂಬುವರ ಪುತ್ರ ಅಶೋಕ್(23) ಮೃತ ಯುವಕ.

ಘಟನೆ ವಿವರ: ಅಶೋಕ್ ಅವರು ಕಾರ್ಯನಿಮಿತ್ತ ಭಾನುವಾರ ರಾತ್ರಿ ತಾಲೂಕಿನ ಎಲೆಕೆರೆ ಗ್ರಾಮದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ ತಾಲೂಕಿನ ಕಣಿವೆಕೊಪ್ಪಲು ಗೇಟ್ ಬಳಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಕೆಟ್ಟು ರಸ್ತೆ ಮಧ್ಯದಲ್ಲೇ ನಿಂತಿತ್ತು. ಟ್ರಾಕ್ಟರ್ ಚಾಲಕ ಯಾವುದೇ ಇಂಡಿಕೇಟರ್, ಪಾರ್ಕಿಂಗ್ ಲೈಟ್‍ಗಳನ್ನು ಹಾಕದೇ ಹಾಗೇ ತೆರಳಿದ್ದನು. ಇದನ್ನು ಗಮನಿಸದೇ ಕೆ.ಆರ್.ಪೇಟೆ ಕಡೆಯಿಂದ ಬೈಕ್‍ನಲ್ಲಿ ಬಂದ ಅಶೋಕ್ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತಲೆಯ ಭಾಗಕ್ಕೆ ತೀವ್ರ ಪೆಟ್ಟುಬಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಮಿಸಿದ ಪಾಂಡವಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »