ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್
ಮೈಸೂರು

ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್

August 31, 2019

ಚಿಕ್ಕಮಗಳೂರು, ಆ.30- ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ನಿನ್ನೆಯಷ್ಟೇ ಆದೇಶ ಹೊರಡಿಸಿ, ಶುಕ್ರವಾರದಿಂದ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರು. ಆದರೆ ಸದ್ಯ ಪೆÇಲೀಸರು ನೀಡಿರುವ ವರದಿಯಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಚಾರ್ಮಾಡಿ ಘಾಟ್ ಸಹಜ ಸ್ಥಿತಿಗೆ ಬರಲು ಇನ್ನಷ್ಟು ದಿನಗಳು ಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಪೆÇಲೀಸರ ವರದಿ ಪಡೆದ ಡಿಸಿ ಬಗಾದಿ ಗೌತಮ್ ಅವರು, ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಅನಿರ್ದಿ ಷ್ಟಾವಧಿಗೆ ಮತ್ತೆ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Translate »