ಸಂಚಾರಿ ನಿಯಮ ಪಾಲಿಸಿದರೆ ಅಪಘಾತಗಳ ನಿಯಂತ್ರಣ
ಚಾಮರಾಜನಗರ

ಸಂಚಾರಿ ನಿಯಮ ಪಾಲಿಸಿದರೆ ಅಪಘಾತಗಳ ನಿಯಂತ್ರಣ

February 5, 2019

ಚಾಮರಾಜನಗರ: ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು.

ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಹನ ಸವಾರರು ಪ್ರಾದೇಶಿಕ ಸಾರಿಗೆ ಇಲಾಖೆ ನಿಯಮಗಳನ್ನು ಪಾಲಿಸಬೇಕು. ಆಗ ಮಾತ್ರ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿ ರಸ್ತೆಯನ್ನು ಬಳಕೆ ಮಾಡುತ್ತಾರೆ. ಇದರಿಂದ ವಾಹನ ಚಾಲಕರಲ್ಲದೆ, ಸಾರ್ವಜನಿಕರು ಸಹ ಸಂಚಾರಿ ನಿಯಮಗಳನ್ನು ಪಾಲಿಸÀ ಬೇಕು ಎಂದು ಕರೆ ನೀಡಿದ ಅವರು, ಪ್ರತಿ ವರ್ಷ ಅಪ ಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಆತಂಕವ್ಯಕ್ತಪಡಿ ಸಿದರಲ್ಲದೆ, ಇತ್ತೀಚೆಗೆÉ ಚಾಲನೆಯಲ್ಲಿದ್ದಾಗ ಚಾಲಕರು, ಸವಾರರು ಮೊಬೈಲ್ ಮಾತನಾಡುತ್ತಾ ಚಾಲನೆ ಮಾಡು ತ್ತಾರೆ. ಇದರಿಂದ ಸಹ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ವಾಹನ ಚಾಲನೆ ವೇಳೆ ಮೊಬೈಲ್ ಬಳಸಬಾ ರದು ಎಂದು ಕಿವಿಮಾತು ಹೇಳಿದರು. ಅಪಘಾತಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಲೋಕೋಪಯೋಗಿ ಇಲಾಖೆ ಪಾತ್ರ ಸಹ ಇದ್ದು, ಈ ಇಲಾಖೆಯು ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಾಣ ಮಾಡಿ ಅಪಘಾತಗಳನ್ನು ತಡೆಗಟ್ಟ ಬೇಕು ಎಂದು ಇದೇ ವೇಳೆ ಸಲಹೆ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಮಾತನಾಡಿ, ಅಜಾಗರೂಕತೆ ಚಾಲನೆಯಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿದೆ. ಮದ್ಯಪಾನ ಮಾಡಿ ಚಾಲನೆ ಮಾಡುವುದು ಮತ್ತು ಸಿಗ್ನಲ್‍ಗಳಲ್ಲಿ ಸಂಚಾರಿ ನಿಯಮ ಉಲ್ಲಂಘಿ ಸುವುದು ಸಹ ಅಪಘಾತಕ್ಕೆ ಕಾರಣವಾಗುತ್ತಿದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಸುಮಾರು 5 ಲಕ್ಷ ಅಪಘಾತ ಗಳು ಸಂಭವಿಸುತ್ತದೆ. ಇದರಲ್ಲಿ ಸುಮಾರು 1.5 ಲಕ್ಷ ಜನ ಸಾವನ್ನಪ್ಪುತ್ತಾರೆ. 4 ಲಕ್ಷ ಜನರು ಅಂಗವಿಕಲ ರಾಗುತ್ತಿದ್ದಾರೆ. ಇದರಿಂದ ಇವರ ಕುಟುಂಬಗಳು ತೊಂದರೆ ಸಿಲುಕುತ್ತವೆ. ಇದು ದೇಶದ ಅಭಿವೃದ್ದಿ ಮೇಲೆ ಇದರ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ವಾಹನ ಚಾಲನೆ ಮಾಡುವಾಗ ಚಾಲಕರು ಮೊಬೈಲ್ ನಲ್ಲಿ ಮಾತನಾಡಬಾರದು. ಮೊಬೈಲ್ ಕರೆಗಳು ಬಂದಾಗ ತಮ್ಮ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಮಾತನಾಡಿ ನಂತರ ಚಾಲನೆ ಮಾಡಬೇಕು. ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದ್ದರಿಂದ ಸಮಯಕ್ಕೆ ಬದಲು ಜೀವ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಾಹಯಕ ಕಾರ್ಯಪಾಲಕ ಇಂಜಿನಿಯರ್ ವೇದಮೂರ್ತಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಮೋಟಾರು ವಾಹನ ನೀರಿಕ್ಷಕರಾದ ಅಬ್ದುಲ್ ನಹೀಮ್, ಸೈಪುದ್ದಿನ್, ಅಧಿಕ್ಷಕ ರಾದ ಕಮರಶೆಟ್ಟಿ, ಗಾಯುತ್ರಿ, ದೀಪಾ, ರಾಜಣ್ಣ, ರಾಜಶೇಖರ್, ಶಶಿಕಲಾ ಸೇರಿದಂತೆ ಇಲಾಖೆಯ ಸಿಬ್ಬಂದಿಗಳಿದ್ದರು.

Translate »