ಮೈಸೂರು: ನಗರದಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ 3,119 ವಾಹನ ಸವಾರರಿಂದ 3,39,800 ರೂ. ದಂಡ ವಿಧಿಸಿದ್ದಾರೆ. ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಮತ್ತು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಗಳು, ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಿದರು.
