ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ
ಕೊಡಗು

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ

May 7, 2018

ಮಡಿಕೇರಿ: ವಿಧಾನಸಭಾ ಚುನಾವಣೆಯ ಮತದಾನವು ಮೇ 12 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಜಿಲ್ಲೆಯ 538 ಮತಗಟ್ಟೆಗಳಿಗೆ ನಿಯೋಜಿಸಿರುವ ಪಿಆರ್‍ಒ ಮತ್ತು ಎಪಿಆರ್‍ಗಳಿಗೆ (ಪ್ರಿಸೈಡಿಂಗ್ ಅಧಿಕಾರಿಗಳು) ಎರಡನೇ ಸುತ್ತಿನ ತರಬೇತಿ ಕಾರ್ಯಕ್ರಮವು ಭಾನುವಾರ ನಡೆಯಿತು.

ನಗರದ ಸಂತ ಜೋಸೆಫರ ಕಾಲೇಜು ಹಾಗೂ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು.

ಪಿಆರ್‍ಒ ಕರ್ತವ್ಯ: ಮತಗಟ್ಟೆ ಹಾಗೂ ಮತದಾನ ಸಮಯ ದಲ್ಲಿನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರದಲ್ಲಿ ಸಾಮಾಗ್ರಿಗಳನ್ನು ಪಡೆಯುವುದು ಮತ್ತು ನೀಡುವುದು ಮತ್ತು ಪಡೆಯುವ ಸಂಪೂರ್ಣ ಜವಾಬ್ದಾರಿ, ಅಣುಕು ಮತದಾನ, ಮತದಾನ ಪ್ರಾರಂಭ, ಮತದಾನ ಮುಕ್ತಾಯ ಗೊಳಿಸುವ ಜವಾಬ್ದಾರಿ. ಮತದಾನದ ದಿವಸ ಎಲ್ಲಾ ಪ್ರಕ್ರಿಯೆಗಳ ಅಂಕಿ ಅಂಶಗಳ ಬಗ್ಗೆ ಚುಣಾಧಿಕಾರಿಗಳಿಗೆ ವರದಿ ಮಾಡುವುದು ಪಿಆರ್‍ಒಗಳ ಸಂಪೂರ್ಣ ಕರ್ತವ್ಯವಾಗಿದೆ ಎಂದು ಚುನಾ ವಣಾಧಿಕಾರಿಗಳು ತಿಳಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಪಿ.ಆರ್.ಒ, ಎ.ಪಿ.ಆರ್.ಒ ಅಧಿಕಾರಿ ಗಳ ಜವಾಬ್ದಾರಿ ಮಹತ್ತರವಾಗಿದ್ದು, ಮಸ್ಟರಿಂಗ್ ದಿನ ಮತ್ತು ಮತಗಟ್ಟೆಗಳಲ್ಲಿ ನಿರ್ವಹಿಸಬೇಕಾದ ಕರ್ತವ್ಯ ಮತ್ತು ಡಿಮಸ್ಟರಿಂಗ್ ಸಂದರ್ಭದಲ್ಲಿ ಅನುಸರಿಸಬೇಕಾದ ಕಾರ್ಯಗಳ ಬಗ್ಗೆ ತರಬೇತಿ ದಾರ ಅಧಿಕಾರಿಗಳು ಮಾಹಿತಿ ನೀಡಿದರು.
ವಿದ್ಯುನ್ಮಾನ ಮತಯಂತ್ರಗಳು, ಅಣುಕು ಮತದಾನ, ಅಂಚೆ ಮತ ಪತ್ರ, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಮತ್ತಿತರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕಿದೆ. ಮತಗಟ್ಟೆ ಅಧಿಕಾರಿಗಳು ಮತಗಟ್ಟೆ ಕ್ಷೇತ್ರದ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳಬೇಕಿದೆ, ಮತದಾರರು ಚುನಾವಣಾ ಆಯೋಗ ನೀಡಿರುವ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗದ ನಿರ್ದೇಶನದಂತೆ ಮತ ದಾನ ಮಾಡುವುದಕ್ಕೆ ಅವಕಾಶ ನೀಡಬೇಕಿದೆ ಎಂದು ಚುನಾವಣಾ ಧಿಕಾರಿಗಳು ತಿಳಿಸಿದರು. ಮಸ್ಟರಿಂಗ್ ದಿನದಂದು ಮತಗಟ್ಟೆಯ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ನಿಗಧಿತ ಸಮಯಕ್ಕೆ ಹಾಜ ರಾಗಬೇಕು. ತಮ್ಮ ತಮ್ಮ ಮತಗಟ್ಟೆಗೆ ಸಂಬಂಧಿಸಿದ ಸಿಬ್ಬಂದಿ ಗಳನ್ನು ಸೇರಿಸಿಕೊಂಡು ಪರಿಚಯ ಮಾಡಿಕೊಳ್ಳುವುದು, ಹಾಜರಾತಿ ಪುಸ್ತಕದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು, ಯಾವುದೇ ಮತಗಟ್ಟೆ ಅಧಕಾರಿ ಇತರೆ ಸಿಬ್ಬಂದಿ ಗೈರು ಆದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರಿಗೆ ತಿಳಿಸುವುದು, ರಜೆ ಹೋದಲ್ಲಿ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು ಮಸ್ಟರಿಂಗ್ ಪಟ್ಟಿಯಿಂದ ದೃಡಪಡಿಸಿಕೊಳ್ಳಬೇಕಿದೆ ಎಂದು ಚುನಾ ವಣಾಧಿಕಾರಿಗಳು ಹೇಳಿದರು.

Translate »