ಮಡಿಕೇರಿ: ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀರಂಗಪಟ್ಟಣ ಪರಿವರ್ತನಾ ಶಾಲೆ ಮತ್ತು ಕಾಲೇಜು, ಜೆ.ಸಿ.ಐ. ಪೊನ್ನಂಪೇಟೆ ನಿಸರ್ಗ ಮತ್ತು ಕಾವೇರಿ ಪದವಿ ಮತ್ತು ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ವಿರಾಜಪೇಟೆ ಕಾವೇರಿ ಕಾಲೇಜಿನ ಕೌಸ್ತುಭ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಜೆಸಿಐ ಪೊನ್ನಂಪೇಟೆ ನಿಸರ್ಗ ಅಧ್ಯಕ್ಷ ವಿಕ್ರಂ ಮೂಡಗದ್ದೆ, ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ಕುಟ್ಟಂಡ ಜಿ.ಉತ್ತಪ್ಪ, ಶ್ರೀರಂಗಪಟ್ಟಣ ಪರಿವರ್ತನಾ ಶಾಲೆ ಹಾಗೂ ಅಂತರಾಷ್ಟ್ರೀಯ ತರಬೇತುದಾರರಾದ ಡೀನ್ ಆರ್.ಎ.ಚೇತನ್ ರಾಮ್ ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಿ.ಎಂ.ನಾಚಪ್ಪ, ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ. ನಾಣಯ್ಯ, ವಿರಾಜಪೇಟೆ ತಾಲ್ಲೂಕು ಕ.ಸಾ.ಪ., ಅಧ್ಯಕ್ಷರಾದ ಮುಲ್ಲೇಂಗಡ ಮಧೋಶ್ ಪೂವಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.