ಮತಾಂತರ ನಿಷೇಧ ಕಾಯ್ದೆ ಮಂಡನೆ: ಸಿಎಂ ಬೊಮ್ಮಾಯಿ
News

ಮತಾಂತರ ನಿಷೇಧ ಕಾಯ್ದೆ ಮಂಡನೆ: ಸಿಎಂ ಬೊಮ್ಮಾಯಿ

December 13, 2021

ಹುಬ್ಬಳ್ಳಿ, ಡಿ.12-ಮತಾಂತರ ನಿಷೇಧ ಕಾಯ್ದೆ ಕರಡಿಗೆ ಒಪ್ಪಿಗೆ ನೀಡಿ, ಬೆಳ ಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಅದನ್ನು ಮಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಅದು ಮಾರಕವಾದದ್ದು. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ತರಲಾಗುತ್ತದೆ. ಇದರಿಂದಾಗಿ ಕ್ರೈಸ್ತ, ಮುಸ್ಲಿಂ, ಬೌದ್ಧ ಹಾಗೂ ಸಿಖ್ ಸಮುದಾಯದವರು ಆತಂಕಪಡಬೇಕಾದ ಅವಶ್ಯಕತೆ ಇಲ್ಲ ಎಂದರು. ಹಿಂದು, ಕ್ರೈಸ್ತ, ಮುಸ್ಲಿಂ, ಸಿಖ್, ಬೌದ್ಧ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ಗುರುತಿಸಲ್ಪಟ್ಟಿರುವ ಧರ್ಮಗಳಾಗಿವೆ. ಈ ಧರ್ಮಗಳ ಪ್ರಾರ್ಥನೆ ಹಾಗೂ ಅವರ ಧಾರ್ಮಿಕ ನಂಬಿಕೆಗಳಿಗೆ ಮತಾಂತರ ನಿಷೇಧ ಕಾಯ್ದೆ ಯಿಂದ ಯಾವುದೇ ರೀತಿ ಅಡ್ಡಿಯಾಗುವುದಿಲ್ಲ ಎಂದ ಅವರು, ಆದರೆ ಬಡತನ ಹಾಗೂ ಜನರ ಕಷ್ಟದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಆಸೆ-ಆಮಿಷಗಳನ್ನೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿರುವುದಿಲ್ಲ ಎಂದರು.

ಮತಾಂತರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಬೇರೆ ಬೇರೆ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿದೆ ಎಂದ ಅವರು, ಇವೆಲ್ಲವನ್ನು ಅವ ಲೋಕಿಸಿ ಕರ್ನಾಟಕದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಬೇಕು ಎಂಬು ವುದು ಬಹು ಜನರ ಅಪೇಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ

ಕಾನೂನು ಇಲಾಖೆಯ ಪರಿಶೀಲನಾ ಸಮಿತಿ ಕರಡು ಪ್ರತಿಯನ್ನು ಪರಿಶೀಲನೆ ಮಾಡಿ ಸಂಪುಟಕ್ಕೆ ತರುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸಿ, ಅಧಿವೇಶನದಲ್ಲಿ ಮಂಡಿಸಲು ಮುಂದಾಗುತ್ತೇವೆ ಎಂದರು.

ಎರಡು ವರ್ಷಗಳ ನಂತರ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತದೆ. ಅದಕ್ಕಾಗಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಅಧಿವೇಶನದಲ್ಲಿ ಜನರಿಗೆ ಹಾಗೂ ರಾಜ್ಯದ ಅಭಿವೃದ್ಧಿಗೆ ಉಪಯೋಗವಾಗುವಂತಹ ಚರ್ಚೆಗಳು ನಡೆಯಲಿ ಎಂದು ನಾವು ಬಯಸುತ್ತೇವೆ. ಉತ್ತರ ಕರ್ನಾಟಕ ಭಾಗದ ಬಗ್ಗೆ ಅರ್ಥಪೂರ್ಣ ಹಾಗೂ ಮಹತ್ವದ ಚರ್ಚೆ ನಡೆಯಬೇಕು ಎಂಬುದು ಆ ಭಾಗದ ಜನರ ಅಪೇಕ್ಷೆ ಯಾಗಿದೆ. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅರ್ಥಪೂರ್ಣ ಚರ್ಚೆಯನ್ನು ಸ್ವಾಗತಿಸುತ್ತದೆ ಎಂದು ಅವರು ಹೇಳಿದರು.

Translate »