ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ
ಮೈಸೂರು

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ

May 18, 2022

ಬೆಂಗಳೂರು, ಮೇ ೧೭- ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ. ಕಳೆದ ವಾರ ನಡೆದ ಕ್ಯಾಬಿನೆಟ್‌ನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಇದೀಗ ರಾಜ್ಯಪಾಲರು ಅದಕ್ಕೆ ಅಂಕಿತ ಹಾಕಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆ ಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧಿವೇಶನ ದಲ್ಲಿ ಕೂಡ ಸರ್ಕಾರ ಮಂಡನೆ ಮಾಡಿರಲಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ÷್ಯ ಹಕ್ಕು ಸಂರಕ್ಷಣಾ ಆಧ್ಯಾದೇಶ ೨೦೨೨ ಇದಕ್ಕೆ ಅನುಮೋದನೆ ನೀಡಿತ್ತು. ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರೀವಾಜ್ಞೆ ಹೊರಡಿ ಸುವಂತೆ ಶಿಫಾರಸು ಮಾಡಲಾಗಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದೆ. ಮತಾಂತರ ನಿಷೇಧ ಕಾಯಿದೆ ಯಾವ ಧರ್ಮದ ವಿರುದ್ಧವೂ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶ ವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದು ಪಡಿ) ವಿಧೇಯಕಕ್ಕೆ ವಿಧಾನಸಭೆಯಿಂದ
ಅAಗೀಕಾರ ಪಡೆಯಲಾಗಿದೆ. ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದ ಸಚಿವರು, ಪ್ರಸಕ್ತ ಸರಕಾರವು ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ ನಿರೀಕ್ಷಿಸಿದ್ದೇವೆ ಎಂದರು. ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿದ ಸಚಿವರು, ಸಮಾಜದಲ್ಲಿ ಶಾಂತಿ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಶ್ನೆಯೊAದಕ್ಕೆ ಉತ್ತರಿಸಿದ ಸಚಿವರು, ಕ್ರೆöÊಸ್ತ ಧಾರ್ಮಿಕ ಮುಖಂಡರು, ರಾಜ್ಯಪಾಲ ರನ್ನು ಭೇಟಿಯಾಗಿ ಮತಾಂತರ ಮಸೂದೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸಂವಿದಾನದತ್ತವಾಗಿ ಇರುವ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಸ್ತಾವವೂ ತಿದ್ದುಪಡಿ ಮಸೂದೆಯಲ್ಲಿ ಇಲ್ಲ ಎಂದರು. ತಿದ್ದುಪಡಿ ಮಸೂದೆ ಬಗ್ಗೆ, ಸದನದಲ್ಲಿ ವಿವರವಾಗಿ ಚರ್ಚಿಸಲಾಗಿದೆ, ಶಾಸಕರೊಬ್ಬರು ಮತಾಂತರ ಹಾವಳಿ ಸೃಷ್ಟಿಸಿದ ಕುಟುಂಬಗಳ ನಡುವಿನ ಘರ್ಷಣೆಗಳ ಕುರಿತೂ ಪ್ರಸ್ತಾಪಿಸಿದ್ದನ್ನೂ ನೆನಪಿಸಿದ ಸಚಿವರು, ಸುಗ್ರೀವಾಜ್ಞೆಗೆ ಸಮ್ಮತಿ ಸಿಕ್ಕಿದ ನಂತರ, ಕಾನೂನನ್ನು ಪರಿಣಾಮ ಕಾರಿಯಾಗಿ ಜಾರಿಗೆ ತರಲಾಗುವುದು, ಎಂದರು. ಈ ಹಿಂದೆ, ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯಿದೆ ತಂದಿದ್ದನ್ನು ನೆನಪಿಸಿದ ಸಚಿವರು “ನಮ್ಮ ಸರಕಾರ ಆ ವಿಧೇಯಕವನ್ನು ಮತ್ತಷ್ಟು ಬಲಗೊಳಿಸಿದ್ದಲ್ಲದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ಬದ್ಧವಾಗಿದೆ” ಎಂದರು.

ಕಾಯ್ದೆಯಲ್ಲಿ ಏನಿದೆ?:ಬಲವಂತದ ಮತಾಂತರ ಜಾಮೀನು ರಹಿತ ಅಪರಾಧ ಮತ್ತು ಅಸಿಂಧು. ಉಡು ಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಆಮಿಷ ಒಡ್ಡಿ ಮತಾಂತರ ಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು. ಮತಾಂ ತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‌ಜಿಓ ಗಳು ಪಾಲ್ಗೊಳ್ಳುವಂತಿಲ್ಲ. ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ. ಧರ್ಮ ಬದಲಿಸುವ ೬೦ ದಿನ ಮೊದಲು ಡಿಸಿಗೆ ಅರ್ಜಿ ಸಲ್ಲಿಸಬೇಕು. ಮತಾಂತರಗೊAಡ ಎಸ್‌ಸಿ, ಎಸ್‌ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದು.

ದಂಡ ಮತ್ತು ಶಿಕ್ಷೆ:ಎಸ್‌ಸಿ,ಎಸ್‌ಟಿ ಸಮುದಾಯದವ ರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ. ಅಪ್ರಾ ಪ್ತರು, ಮಹಿಳೆಯರು, ಬುದ್ಧಿಮಾಂದ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು. ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ ೩ರಿಂದ ೧೦ ವರ್ಷ ಜೈಲು ಶಿಕ್ಷೆ, ೫೦ ಸಾವಿರ ದಂಡ.  ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ ೩ರಿಂದ ೫ ವರ್ಷ ಜೈಲು ಶಿಕ್ಷೆ, ೨೫ ಸಾವಿರ ದಂಡ. ಸಾಮೂಹಿಕ ಮತಾಂತರ ಮಾಡಿದವರಿಗೆ ೩ರಿಂದ ೧೦ ವರ್ಷ ಜೈಲು ಶಿಕ್ಷೆ, ೧ ಲಕ್ಷ ದಂಡ. ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ ೫ ಲಕ್ಷ ಪರಿಹಾರ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವ ನಿಂದಲೇ ವಸೂಲಿ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

Translate »