ಇಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ
ಚಾಮರಾಜನಗರ

ಇಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ

July 19, 2018

ಚಾಮರಾಜನಗರ:  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲ ವಕೀಲರ ಸಂಘ, ಓಡಿಪಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಜು.19ರಂದು ಬೆಳಿಗ್ಗೆ 10 ಗಂಟೆಗೆ ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ – ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಓಡಿಪಿ ಸಂಸ್ಥೆ ನಿರ್ದೇಶಕ ವಂ. ಸ್ವಾಮಿ. ಸ್ನಾನಿ ಡಿ ಅಲ್ಮೇಡಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮಲತಾ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರತನ್ ಕುಮರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಂ.ರವಿ, ನಗರಸಭೆ ಸದಸ್ಯ ಮಹೇಶ್, ಓಡಿಪಿ ಸಂಸ್ಥೆಯ ಮಹಿಳೋದಯ ಮಹಿಳಾ ಒಕ್ಕೂಟದ ಸಂಯೋಜಕಿ ಸುನೀತಾ, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜಿ. ಸುರೇಶ್, ಕಾಗಲವಾಡಿ ಗ್ರಾಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಜ್ಯೋತಿ ಪಾಲ್ಗೊಳ್ಳಲಿದ್ದಾರೆ.

Translate »