ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ
ಮೈಸೂರು

ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ

September 3, 2020

ಮೈಸೂರು, ಸೆ. 2-ಜೆಎಸ್‍ಎಸ್ ಮಹಾವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರ ಪತಿ ಡಾ.ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಶ್ರದ್ಧಾಂ ಜಲಿ ಸಲ್ಲಿಸಲಾಯಿತು. ಕಾರ್ಯದರ್ಶಿ ಪ್ರೊ. ಎಸ್.ಪಿ. ಮಂಜುನಾಥ್ ಅಧ್ಯಕ್ಷತೆ ವಹಿಸಿ, ಸಂತಾಪ ಸೂಚಿಸಿದರು.

ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಪ್ರಣಬ್ ಮುಖರ್ಜಿ ಯವರು ವಿಶಾಲ ಮನೋಭಾವದವರಾಗಿದ್ದರು. ಎಲ್ಲ ಪಕ್ಷ ಮತ್ತು ರಾಜಕಾರಣಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಾಮಾನ್ಯ ಹಂತದಿಂದ ರಾಷ್ಟ್ರಪತಿ ಹುದ್ದೆಗೆ ಏರಿದ ಅಪರೂಪದ ವ್ಯಕ್ತಿಯಾಗಿದ್ದರು. ಜೆಎಸ್‍ಎಸ್ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಆಗ ಮಿಸಿದ್ದು ಸ್ಮರಣೀಯ ಎಂದರು.

ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಕೆ.ಆರ್. ಸಂತಾನಂ, ಮುಖರ್ಜಿಯವರು ರಾಜಕೀಯ ಮುತ್ಸದ್ದಿ ಯಾಗಿದ್ದರು. ಇತರ ರಾಜಕಾರಣಿಗಳಿಗೆ ಮಾದರಿಯಾಗಿ ದ್ದರು. ಆರು ಬಾರಿ ರಾಜ್ಯಸಭೆ ಮತ್ತು ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಹಣಕಾಸು, ಕೈಗಾ ರಿಕೆ, ರಕ್ಷಣೆ, ವಾಣಿಜ್ಯ ಮತ್ತು ಯೋಜನಾ ವಿಭಾಗದಂಥ ಪ್ರಮುಖ ಖಾತೆÉÉಗಳಲ್ಲಿ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಗಮನಿಸಿ ಇಂದಿನ ಕೇಂದ್ರ ಸರ್ಕಾರ ಇವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ಅವರು ಸ್ಮರಿಸಿದರು.
ಹಣಕಾಸು ವಿಭಾಗದ ನಿರ್ದೇಶಕ ಎಸ್.ಪುಟ್ಟಸುಬ್ಬಪ್ಪ, ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್. ಮಹೇಶ್, ಶಾಲಾ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಎಚ್.ವಿ.ಶೇಷಗಿರಿರಾವ್, ಕಾಲೇಜು ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ, ಇಂಜಿ ಯರಿಂಗ್ ವಿಭಾಗದ ಪ್ರಭಾರ ನಿರ್ದೇಶಕ ರಮೇಶ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Translate »