ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜು.2ರಿಂದ 13ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಾದಿಂದ ಹರಡುವ ಒಂದು ಸಾಂಕ್ರಾಮಿಕ ರೋಗ. ಇದು ಸೋಂಕುಳ್ಳ ವ್ಯಕ್ತಿ ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಚಿಕಿತ್ಸೆ ಪಡೆಯದ ವ್ಯಕ್ತಿ ಒಂದು ವರ್ಷದಲ್ಲಿ 10 ಅಥವಾ ಹೆಚ್ಚು ಜನರಿಗೆ ಸೋಂಕು ಹರಡಬಲ್ಲ. ಆದ್ದರಿಂದ ಈ ರೋಗದ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನಿರಂತರ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಗುಣಪಡಿಸುವುದು. ಟಿಬಿಯು ಶ್ವಾಸಕೋಶಗಳಿಗಷ್ಟೇ ಅಲ್ಲದೆ ದೇಹದ ಇನ್ನಿತರ ಭಾಗಗಳಿಗೂ ಹರಡಬಹುದು. ರೋಗ ನಿರ್ಹಯಿಸಿದ ಎಲ್ಲಾ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ಇದೆ. ಕಫವನ್ನು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಬಹುದಾಗಿದೆ.
ಅಪೂರ್ಣ ಚಿಕಿತ್ಸೆಯು ಹೆಚ್ಚಿನ ತೋಂದರೆಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಕೊಳಚೆ ಪ್ರದೇಶ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬೀಡಿ ಕಾರ್ಮಿಕರು, ನೇಕಾರರ ಸಮುದಾಯ, ಹೆಚ್‍ಐವಿ ಸೋಂಕಿತರು, ಮಧುಮೇಹ, ತಂಬಾಕು ಸೇವನೆ ಮಾಡುವವರಿಗೆ ರೋಗ ಬಗ್ಗೆ ಹೆಚ್ಚಿನ ಅರಿವು ಮೂಸಿಸುವುದು ಅಗತ್ಯ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಆರೋಗ್ಯ ಸಹಾಯವಾಣ ಸಂಖ್ಯೆ 104ಕ್ಕೆ ಕರೆ ಮಾಡಿ ತಿಳಿದುಕೊಳ್ಳಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.