ಮೈಸೂರಲ್ಲಿ ಮಂಗಳವಾರ  33 ಮಂದಿಗೆ ಸೋಂಕು
ಮೈಸೂರು

ಮೈಸೂರಲ್ಲಿ ಮಂಗಳವಾರ 33 ಮಂದಿಗೆ ಸೋಂಕು

October 6, 2021

ಮೈಸೂರು, ಅ.5(ವೈಡಿಎಸ್)-ಮೈಸೂರು ಜಿಲ್ಲೆಯಲ್ಲಿ ಮಂಗಳವಾರ 33 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಇಬ್ಬರು ಗುಣಮುಖರಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1,75,288 ಮಂದಿ ಗುಣ ಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,78,236 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ 2,393 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 555 ಸಕ್ರಿಯ ಪ್ರಕರಣಗಳಿವೆ.

ರಾಜ್ಯ: ಬಳ್ಳಾರಿ 7, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 201, ಚಾಮ ರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 9, ದಕ್ಷಿಣಕನ್ನಡ 55, ದಾವಣಗೆರೆ 2, ಧಾರವಾಡ 5, ಹಾಸನ 23, ಕಲಬುರಗಿ 1, ಕೊಡಗು 7, ಕೋಲಾರ 5, ಮಂಡ್ಯ 11, ಮೈಸೂರು 33, ರಾಯ ಚೂರು 1, ರಾಮನಗರ 5, ಶಿವಮೊಗ್ಗ 5, ತುಮಕೂರು 37, ಉಡುಪಿ 19, ಉತ್ತರ ಕನ್ನಡ 26, ವಿಜಯಪುರ 2 ಸೇರಿ ರಾಜ್ಯದಲ್ಲಿ ಮಂಗಳವಾರ 523 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ಒಂದೂ ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖರಾದ 575 ಮಂದಿ ಸೇರಿ ಇದುವರೆಗೆ ಒಟ್ಟು 29,29,008 ಸೋಂಕಿತರು ಗುಣ ಕಂಡಿದ್ದಾರೆ. ಮಂಗಳವಾರ ರಾಜ್ಯದಲ್ಲಿ 14 ಸೋಂಕಿತರು ಮೃತಪಟ್ಟಿದ್ದು, ಸೋಂಕಿಗೆ ಬಲಿಯಾ ದವರ ಒಟ್ಟು ಸಂಖ್ಯೆ 37,845ಕ್ಕೆ ಏರಿಕೆಯಾಗಿದೆ. ಪ್ರಸ್ತುತ 11,926 ಸಕ್ರಿಯ ಪ್ರಕರಣಗಳಿವೆ.

Translate »