ಗೋಣಿಕೊಪ್ಪಲು, ಮಾ.5- ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ಬಂದ ಅಮ್ಮ, ಮಗಳು ಕಾಳು ಮೆಣಸು ಕೊಯ್ಯಲು ಹೋಗಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಕುಂದಾ ಗ್ರಾಮದ ಈಚೂರು ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು 45 ವರ್ಷದ ಸ್ವರೂಪ ಖಾತುನ್ ಮತ್ತು 20 ವರ್ಷದ ಹಸೀನಾ ಎಂದು ಗುರುತಿಸಲಾಗಿದೆ. ಈಚೂರು ಗ್ರಾಮದ ರಮೇಶ್ ಅವರ ತೋಟ ದಲ್ಲಿ ಕಾಳು ಮೆಣಸು ಕೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾಳು ಕೊಯ್ಯಲು ಅಲ್ಯೂಮಿನಿಯಂ ಏಣಿಯನ್ನು ಬಳಸಿದ್ದೆ ಈ ಘಟನೆ ಕಾರಣ ಎನ್ನಲಾಗಿದೆ.
ಕರಿಮೆಣಸು ಕೊಯ್ಯುವಾಗ ಅಲ್ಯೂಮಿನಿಯಂ ಏಣಿ ಬಳಕೆ ಮಾಡಬೇಡಿ ಎಂದು ಕಾರ್ಮಿಕ ಇಲಾಖೆ ಆದೇಶ ಹೋರಾಡಿಸಿದ್ದರೂ ಕೊಡಗಿನ ಬಹುತೇಕ ಕಾಫಿ ತೋಟದಲ್ಲಿ ಆದೇಶ ಪಾಲನೆ ಆಗುತ್ತಿಲ್ಲ. ಇದರಿಂದಾಗಿ ಇಂದು ಕೂಲಿ ಹುಡುಕಿ ಬಂದ ಎರಡು ಜೀವಗಳು ಬಲಿಯಾಗಿವೆ. ಕಾಳು ಕೊಯ್ಯಲು ಹೋದ ಖಾತುನ್ ಮತ್ತು ಹಸೀನಾ ಅಲ್ಯೂಮಿನಿಯಂ ಏಣಿ ಮೇಲೆ ಹತ್ತಿದ್ದಾರೆ. ಈ ವೇಳೆ ತೋಟದ ಮೇಲೆ ಹಾದುಹೋಗಿದ್ದ 11 ಕೆವಿ ವಿದ್ಯುತ್ ತಂತಿಯಿಂದ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಮಹಿಳೆಯರಿಗೂ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ಪರ್ಶದ ತೀವ್ರತೆ ಇಬ್ಬರು ಮಹಿಳೆಯರ ಕಾಲು ಸುಟ್ಟು ಕರಕಲಾಗಿದೆ. ಮೃತದೇಹಗಳನ್ನು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಗೋಣಿಕೊಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.