ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ತಾಲೂಕಿನ ಕಲ್ಲಹಳ್ಳಿ ಗೇಟ್ ಹತ್ತಿರ ಕಾರೂಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂಬಕ್ಕೆ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿ ದ್ದಾರೆ. ಬೆಂಗಳೂರಿನ ಕಲಾಸಿಪಾಳ್ಯದ ಮಹಮದ್ ಫಾರುಕ್ (60) ಮೃತಪಟ್ಟವರು. ಕೇರಳದ ಕಾಸರಗೂಡಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ಇವರ ಕಾರು ರಸ್ತೆ ಪಕ್ಕದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಮಹಮ್ಮದ್ ಫಾರುಕ್‍ರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು. ಕಾರಿನಲ್ಲಿದ್ದ ಶೇಖ್ ಮುಸ್ತಫಾ ಮತ್ತು ಅಬ್ದುಲ್ ರೆಹಮಾನ್‍ಗೆ ಗಾಯಗೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪಟ್ಟಣದ ಸಮೀಪದ ಸಾಯಿಮಂದಿರದ ಬಳಿ ಮಂಗಳವಾರ ಮಧ್ಯಾಹ್ನ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಬೆಮೆಲ್ ಕಾರ್ಖಾನೆಯ ಅಧಿಕಾರಿ ಶ್ರೀನಿವಾಸ್ ರೆಡ್ಡಿ(52) ಮೃತರು. ಇವರು ಚಿಕ್ಕ ಮಗಳೂರು ಜಿಲ್ಲೆಯ ತರಿಕೆರೆಯಿಂದ ಬೆಂಗಳೂರಿಗೆ ಕಾರಿನಲ್ಲಿ ಹೋಗುತ್ತಿದ್ದರು. ಸಾಯಿ ಮಂದಿರದ ಬಳಿ ಕಾರ್ ನಿಲ್ಲಿಸಿ ಮೊಬೈಲ್‍ನಲ್ಲಿ ಮಾತನಾಡುತ್ತಾ, ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ, ಬೇಲೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‍ರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕ್ಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.