ಸಕಲೇಶಪುರ: ಬೆಂಗಳೂರು- ಮಂಗಳೂರು ನಡುವೆ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಎರಡು ಆನೆ ಮರಿಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಯಡಕುಮರಿ ಬಳಿ ನಡೆದಿದೆ.
ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಹಾದು ಹೋಗಿರುವ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಭಾನು ವಾರ ರಾತ್ರಿ ಅವಘಡ ಸಂಭವಿಸಿದೆ. ರೈಲ್ವೆ ಹಳಿ ದಾಟುತ್ತಿದ್ದ ವೇಳೆ ಆನೆ ಮರಿಗೆ ರೈಲು ಡಿಕ್ಕಿ ಹೊಡೆರುವ ಸಾಧ್ಯತೆ ಇದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಶಿವರಾಮ್ ಬಾಬು ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಪರಿಶೀಲನೆ ನಡೆಸಿದರು.