ಬೆಂಗಳೂರು ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ಬೆಂಕಿ: ಸಂಪೂರ್ಣ ಹಾನಿ
News

ಬೆಂಗಳೂರು ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ಬೆಂಕಿ: ಸಂಪೂರ್ಣ ಹಾನಿ

August 13, 2021

ಬೆಂಗಳೂರು, ಆ.12-ಬೆಂಗಳೂರಿನ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಗುರುವಾರ ಮುಂಜಾನೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮುಂಜಾನೆ 1.25ರಲ್ಲಿ ಮನೆಯ ಹಿಂಬದಿ ಕಾಂಪೌಂಡ್ ಹಾರಿ ಒಳ ಪ್ರವೇಶಿಸಿರುವ ಮೂವರು ದುಷ್ಕರ್ಮಿ ಗಳು, ಮನೆಯ ಗಾರ್ಡನ್‍ನ ಗಿಡಗಳ ಮಧ್ಯೆ ನುಸುಳಿ ಬಂದು ಎರಡೂ ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿ ದ್ದಾರೆ. ಈ ಕೃತ್ಯವನ್ನು ಕೇವಲ 2 ನಿಮಿಷಗಳಲ್ಲಿ ಮುಗಿಸಲಾಗಿದೆ. ಕಾರುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು,
ಟೈರ್‍ಗಳು ಸ್ಫೋಟಿಸಿದ ಶಬ್ದ ಕೇಳಿ ಮನೆಯಲ್ಲಿ ನಿದ್ರಿಸುತ್ತಿದ್ದ ಸತೀಶ್ ರೆಡ್ಡಿ ಅವರ ಪತ್ನಿ ಹೊರಬಂದು ನೋಡಿದಾಗ ಕಾರುಗಳು ಬೆಂಕಿ ಹೊತ್ತಿ ಉರಿಯುತ್ತಿರು ವುದು ಕಂಡು ಬಂದಿದೆ. ನಂತರ ಸತೀಶ್ ರೆಡ್ಡಿ ಧಾವಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. 2.10ರ ವೇಳೆಗೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರಾದರೂ, ಅಷ್ಟರಲ್ಲಿ ಎರಡು ಕಾರುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದವು. ಪ್ರಾರಂಭದಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿರ ಬಹುದು ಎಂದು ಭಾವಿಸಿದ್ದ ಸತೀಶ್ ರೆಡ್ಡಿ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮೂವರು ದುಷ್ಕರ್ಮಿಗಳು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿ ರುವುದು ದೃಢಪಟ್ಟಿದೆ. ನಂತರ ಅವರು, ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸತೀಶ್ ರೆಡ್ಡಿ ಅವರ ಮನೆ ಸುತ್ತಮುತ್ತ ಸಿಸಿ ಕ್ಯಾಮರಾ ಫುಟೇಜ್‍ಗಳನ್ನು ಪೊಲೀಸರು ಪರಿಶೀಲಿಸಲಾಗಿ ದುಷ್ಕರ್ಮಿಗಳು ಕೃತ್ಯ ನಡೆಸಿದ ನಂತರ ಕೆಲವು ಬಿಲ್ಡಿಂಗ್‍ಗಳ ಮೇಲೆ ಹಾರಿ ನಂತರ ಗಲ್ಲಿಗಳಲ್ಲಿ ನುಸುಳಿ ಓಡಿರುವುದು ಕಂಡು ಬಂದಿದೆ. ಪೊಲೀಸರು ಸುಮಾರು 200 ಫುಟೇಜ್‍ಗಳನ್ನು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಸುಳಿವು ದೊರೆತಿದೆ ಎನ್ನಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ನೇತೃತ್ವದಲ್ಲಿ ದುಷ್ಕರ್ಮಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದ್ದು, ರಾತ್ರಿ ವೇಳೆಗೆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ಮುಂದುವರೆಸಿ ದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸತೀಶ್ ರೆಡ್ಡಿ ಅವರ ನಿವಾಸಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು. ಈ ಕುರಿತು ಮಾಧ್ಯಮ ಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾರೋ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ. ಸಿಸಿ ಕ್ಯಾಮರಾ ಫುಟೇಜ್ ಗಳು ದೊರೆತಿದ್ದು, ಆದಷ್ಟು ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

ಶಿವನ ಮೂರ್ತಿ ವಿವಾದ: ಬೇಗೂರು ಕೆರೆಯಲ್ಲಿ ಬಿಬಿಎಂಪಿ ಸ್ಥಾಪಿಸಿದ್ದ ಶಿವನ ಮೂರ್ತಿ ವಿವಾದವೇ ಈ ಕೃತ್ಯಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ. ಬೇಗೂರು ಕೆರೆ ನಡುವೆ ದ್ವೀಪ ಸೃಷ್ಟಿಸಿ ಅದರ ಮೇಲೆ ಬಿಬಿಎಂಪಿ ವತಿಯಿಂದ ಶಿವನ ಮೂರ್ತಿಯನ್ನು ಸ್ಥಾಪಿಸ ಲಾಗಿದೆ. ಇದನ್ನು ಪ್ರಶ್ನಿಸಿ ಕೆರೆ ಅಭಿವೃದ್ಧಿ ಪ್ರಾಧಿಕಾರ ಹೈಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್ ಆದೇಶದಂತೆ ಕೆಲ ದಿನಗಳ ಹಿಂದೆ ಶಿವನ ಮೂರ್ತಿಗೆ ಪ್ಲಾಸ್ಟಿಕ್ ಹೊದಿಕೆ ಹೊದಿಸಲಾಗಿತ್ತು. ಈ ಮಧ್ಯೆ ನಿನ್ನೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ಲಾಸ್ಟಿಕ್ ಹೊದಿಕೆಯನ್ನು ಕಿತ್ತು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳಕ್ಕೆ ಶಾಸಕ ಸತೀಶ್ ರೆಡ್ಡಿ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು 9 ಮಂದಿಯನ್ನು ಬಂಧಿಸಿ, ಬಿಡುಗಡೆ ಮಾಡಿದ್ದರು. ಈ ವಿಚಾರದಲ್ಲಿ ಕೋರ್ಟ್ ಆದೇಶದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸತೀಶ್ ರೆಡ್ಡಿ ಹೇಳಿದ್ದೇ ಈ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸತೀಶ್ ರೆಡ್ಡಿ, ನನಗೆ ಯಾರೂ ಶತ್ರುಗಳಿಲ್ಲ. ಶಿವನ ಮೂರ್ತಿ ವಿವಾದವನ್ನು ಈ ಕೃತ್ಯಕ್ಕೆ ತಾಳೆ ಹಾಕಬಹುದಷ್ಟೇ. ಆದರೆ ಆ ವಿವಾದಕ್ಕೂ ಈ ಕೃತ್ಯಕ್ಕೂ ಸಂಬಂಧವಿಲ್ಲ ಎಂದು ನನಗನಿಸುತ್ತದೆ. ಪೊಲೀಸರು ಒಂದೇ ಆಯಾಮದಲ್ಲಿ ತನಿಖೆ ನಡೆಸಿದರೆ ದುಷ್ಕರ್ಮಿಗಳು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದರು.
ಇದೇ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಈ ಕೃತ್ಯದಲ್ಲಿ ನೇರವಾಗಿ ಮೂವರು ಭಾಗಿಯಾಗಿದ್ದಾರೆ. ಪರೋಕ್ಷವಾಗಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಿಲ್ಲ. ಈಗ ಓರ್ವ ವ್ಯಕ್ತಿ ಹೆಸರು ಕೇಳಿಬರುತ್ತಿದೆ. ಆದರೆ ಆ ವ್ಯಕ್ತಿ ಈ ಕೃತ್ಯದಲ್ಲಿ ಭಾಗಿಯಾಗಿದ್ದರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದೆ. ರಾತ್ರಿಯೊಳಗೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದರು.

Translate »