ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಚಾಮರಾಜನಗರ

ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

January 10, 2020

ಚಾಮರಾಜನಗರ, ಜ.9- ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಹಾಗೂ ಪರೀಕ್ಷಾ ಸಮಯದಲ್ಲಿ ಹೇಗೆಲ್ಲಾ ತಯಾರಿ ನಡೆಸ ಬೇಕು. ಯಾವ ರೀತಿ ಪರೀಕ್ಷೆಗೆ ಸಿದ್ಧರಾಗಬೇಕು ಎಂಬುದರ ಬಗ್ಗೆ ಸ್ಪತಃ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸ ಲಿದ್ದು, ಜಿಲ್ಲೆಯ ಇಬ್ಬರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಜನವರಿ 20 ರಂದು ನವದೆಹಲಿ ಯಲ್ಲಿ ನಡೆಯುಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿ ಸಲು ಚಾಮರಾಜನಗರ ಜಿಲ್ಲೆ ಗುಂಡ್ಲು ಪೇಟೆಯಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೆ ತರಗತಿ ವಿದ್ಯಾರ್ಥಿನಿ ಅಪೂರ್ವ ಹಾಗೂ ಯಳಂದೂರಿನಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಅರ್ಫತ್ ಆಯ್ಕೆಯಾಗಿದ್ದಾರೆ.

ಸ್ವತಃ ಮೋದಿ ಅವರೊಡನೆ ಸಂವಾದ ನಡೆಸಲು ಖುಷಿಯಾಗುತ್ತಿದೆ. ದೇಶದ ಎಲ್ಲಾ ರಾಜ್ಯಗಳಲ್ಲೂ ಪ್ರಾಥಮಿಕ ಹಂತ ದಿಂದಲೇ ಏಕರೂಪ ಶಿಕ್ಷಣ ಪದ್ಧತಿ ಜಾರಿಗೆ ತರುವಂತೆ ಪ್ರಧಾನಿಮೋದಿ ಅವರಲ್ಲಿ ಮನವಿ ಮಾಡುವುದಾಗಿ ಯಳಂದೂರಿನ ಅರ್ಫತ್ ಹೇಳಿದರು.

ಪ್ರಧಾನಿಯವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ ಹಾಗಾಗಿ ಈ ಅವಕಾಶವನ್ನು ಸದುಪ ಯೋಗಪಡಿಸಿ ಕೊಳ್ಳುತ್ತೇನೆ ಎನ್ನುವ ಅಪೂರ್ವ, ವಿದ್ಯಾರ್ಥಿಗಳಲ್ಲಿ ಕೃಷಿ ಬಗ್ಗೆ ಆಸಕ್ತಿ ಕಡಿಮೆ ಯಾಗುತ್ತಿದೆ. ಹಾಗಾಗಿ ಶಿಕ್ಷಣದಲ್ಲಿ ಕೃಷಿಗೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಅವರ ಗಮನ ಸೆಳೆಯುವುದಾಗಿ ಹೇಳುತ್ತಾಳೆ. ಜ.20 ರಂದು ನವದೆಹಲಿ ಯಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಿಂದುಳಿದ ಚಾಮರಾಜ ನಗರ ಜಿಲ್ಲೆಯಿಂದ ಇಬ್ಬರು ಪ್ರತಿಭಾ ವಂತ ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

Translate »