ಎರಡು ವರ್ಷದ ನಂತರ 59 ನಗರಸಭೆ, 90 ಪುರಸಭೆ, ಮೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ಮೈಸೂರು

ಎರಡು ವರ್ಷದ ನಂತರ 59 ನಗರಸಭೆ, 90 ಪುರಸಭೆ, ಮೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪ್ರಕಟ

October 9, 2020

ಬೆಂಗಳೂರು, ಅ.8-ರಾಜ್ಯ ಸರ್ಕಾರ ನಗರ ಪ್ರದೇಶದ ಸ್ಥಳೀಯ ಸಂಸ್ಥೆಗಳಾದ 59 ನಗರಸಭೆ, 90 ಪುರಸಭೆ ಮತ್ತು 3 ಪಟ್ಟಣ ಪಂಚಾಯ್ತಿಗಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಯನ್ನು ಪ್ರಕಟಿಸಿದೆ. ಇದರಿಂದಾಗಿ ಚುನಾ ವಣೆ ನಡೆದಿದ್ದರೂ ಕೂಡ ಕಳೆದ 2 ವರ್ಷಗಳಿಗೂ ಹೆಚ್ಚು ಕಾಲ ಚುನಾಯಿತ ಆಡಳಿತ ಮಂಡಳಿ ಇಲ್ಲದೇ ಇದ್ದ ಸ್ಥಳೀಯ ಸಂಸ್ಥೆಗಳ ಸಮಸ್ಯೆ ನೀಗಿದಂತಾಗಿದೆ.

2018ರ ಆಗಸ್ಟ್ ತಿಂಗಳಿನಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರ ಚುನಾ ವಣೆ ನಡೆದು, ಸೆಪ್ಟೆಂಬರ್ ಮೊದಲ ವಾರ ಫಲಿ ತಾಂಶವೂ ಘೋಷಣೆ ಯಾಗಿತ್ತು. ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗದ ಕಾರಣ ಸ್ಥಳೀಯ ಸಂಸ್ಥೆ ಗಳಲ್ಲಿ ಚುನಾಯಿತ ಆಡ ಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿರಲಿಲ್ಲ. ಚುನಾವಣೆ ಯಲ್ಲಿ ಗೆಲುವು ಸಾಧಿಸಿದರೂ ಅಧಿ ಕೃತವಾಗಿ ಅಧಿಕಾರ ಚಲಾಯಿಸಲು ಸಾಧ್ಯವಾಗದೇ ಚುನಾಯಿತ ಪ್ರತಿನಿಧಿ ಗಳು ತೊಂದರೆ ಅನುಭವಿಸುತ್ತಿದ್ದರು. ಈ ಮಧ್ಯೆ ಒಮ್ಮೆ ಸರ್ಕಾರ ಅಧ್ಯಕ್ಷ-ಉಪಾ ಧ್ಯಕ್ಷರ ಮೀಸಲಾತಿ ಪ್ರಕಟಿಸಿತ್ತಾದರೂ, ಅದನ್ನು ಪ್ರಶ್ನಿಸಿ ಕೆಲವರು ನ್ಯಾಯಾ ಲಯದ ಮೊರೆ ಹೋದ ಕಾರಣ ಅದಕ್ಕೆ ತಡೆಯುಂಟಾಗಿತ್ತು. ಇದೀಗ ಎಲ್ಲಾ ಅಡೆ ತಡೆಗಳೂ ನಿವಾರಣೆಯಾಗಿ ಸರ್ಕಾ ರವು ಅಂತಿಮವಾಗಿ ಮೀಸಲಾತಿ ಪಟ್ಟಿ ಯನ್ನು ಗುರುವಾರ ಪ್ರಕಟಿಸಿದೆ.

ನಗರಸಭೆ: ಮೈಸೂರು ಜಿಲ್ಲೆಯ ಹುಣಸೂರು ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಿ ರಿಸಲಾಗಿದೆ. ನಂಜನಗೂಡು ನಗರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾ ಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ -ಎ ಮಹಿಳೆಗೆ ಮೀಸಲಾ ಗಿದೆ. ಚಾಮರಾಜನಗರ ನಗರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾ ಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ. ಕೊಳ್ಳೇ ಗಾಲ ನಗರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿ ಶಿಷ್ಟ ಪಂಗಡ ಮಹಿಳೆ. ಹಾಸನ ನಗರ ಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ. ಅರಸೀಕೆರೆ ನಗರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

ಪುರಸಭೆ: ಮೈಸೂರು ಜಿಲ್ಲೆಯ ಬನ್ನೂರು ಪುರಸಭೆಗೆ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ.

ಹೆಚ್.ಡಿ.ಕೋಟೆ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಕೆ.ಆರ್.ನಗರ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ. ಪಿರಿಯಾಪಟ್ಟಣ ಪುರಸಭೆಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ತಿ.ನರಸೀಪುರ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪುರಸಭೆಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ. ಮದ್ದೂರು ಪುರಸಭೆಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಮಳವಳ್ಳಿ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ನಾಗಮಂಗಲ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ. ಪಾಂಡವಪುರ ಪುರಸಭೆಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಶ್ರೀರಂಗಪಟ್ಟಣ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಹಾಸನ ಜಿಲ್ಲೆಯ ಬೇಲೂರು ಪುರಸಭೆಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಚನ್ನರಾಯಪಟ್ಟಣ ಪುರಸಭೆಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಬಿ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ. ಹೊಳೆನರಸೀಪುರ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಬಿ ಮಹಿಳೆಗೆ ಮೀಸಲಿಡಲಾಗಿದೆ.

ಪಟ್ಟಣ ಪಂಚಾಯ್ತಿ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಪಂಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಸರಗೂರು ಪಪಂಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಚಾಮರಾಜನಗರ ಜಿಲ್ಲೆಯ ಹನೂರು ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಬಿ, ಯಳಂದೂರು ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ. ಕೊಡಗು ಜಿಲ್ಲೆಯ ಕುಶಾಲನಗರ ಪಪಂಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಸಿದ್ದಾಪುರ ಪಪಂ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಸೋಮವಾರ ಪೇಟೆ ಪಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ. ವಿರಾಜಪೇಟೆ ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ. ಹಾಸನ ಜಿಲ್ಲೆ ಆಲೂರು ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಅರಕಲಗೂಡು ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಬಿಗೆ ಮೀಸಲಿಟ್ಟು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಎ.ವಿಜಯಕುಮಾರ್ ಆದೇಶ ಹೊರಡಿಸಿದ್ದಾರೆ.

 

 

Translate »