ಬಳ್ಳಾರಿಯಲ್ಲಿ ಉಗ್ರಪ್ಪ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ
ಮೈಸೂರು

ಬಳ್ಳಾರಿಯಲ್ಲಿ ಉಗ್ರಪ್ಪ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ

October 16, 2018

ಬೆಂಗಳೂರು: ಪ್ರತಿಷ್ಟಿತ ಬಳ್ಳಾರಿ ಲೋಕ ಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾಗಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರನ್ನು ಘೋಷಿಸ ಲಾಗಿದ್ದು, ಅವರು ನಾಳೆ(ಅ.16) ಬಳ್ಳಾರಿ ಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿಯ ಶ್ರೀರಾಮುಲು ಅವರು ವಿಧಾನಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಲೋಕಸಭಾ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಈಗ ಅವರ ಸಹೋದರಿ ಮಾಜಿ ಸಂಸದೆ ಶಾಂತಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಈ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಜೆಡಿಎಸ್ ಬಿಟ್ಟುಕೊಟ್ಟಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಉಗ್ರಪ್ಪ ಅವರನ್ನು ಘೋಷಿಸಿದೆ. ನಾಳೆ(ಅ.16) ಉಗ್ರಪ್ಪ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಇಂದೇ ಬಳ್ಳಾರಿಗೆ ತೆರಳಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಈ ಉಪಚುನಾವಣೆಯೂ ಶ್ರೀರಾಮುಲು ಮತ್ತು ಡಿ.ಕೆ.ಶಿವಕುಮಾರ್ ಅವರ ನಡು ವಿನ ಕದನವೆಂದೇ ಹೇಳಲ್ಪಡುತ್ತದೆ.

Translate »