ವಿಧಾನಸಭೆಯಿಂದ ವಿಧಾನ ಪರಿಷತ್‍ನ 11 ಸ್ಥಾನಕ್ಕೆ ಅವಿರೋಧ ಆಯ್ಕೆ ಖಚಿತ
ಮೈಸೂರು

ವಿಧಾನಸಭೆಯಿಂದ ವಿಧಾನ ಪರಿಷತ್‍ನ 11 ಸ್ಥಾನಕ್ಕೆ ಅವಿರೋಧ ಆಯ್ಕೆ ಖಚಿತ

June 1, 2018

ಬೆಂಗಳೂರು: ರಾಜ್ಯ ವಿಧಾನ ಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಅವಿ ರೋಧ ಆಯ್ಕೆಯಾಗುವುದು ಖಚಿತವಾಗಿದೆ.
ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ವಿಧಾನಸಭೆಯ ತಮ್ಮ ಪಕ್ಷದ ಸದಸ್ಯರ ಆಧಾರದ ಮೇಲೆ ಬಿಜೆಪಿಯಿಂದ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್‍ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ವಿಧಾನಸಭೆ ಜಂಟಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಚುನಾ ವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿ ಅವರಿಗೆ 11 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಇಂದು ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ರಘುನಾಥ್ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ, ಎಸ್.ರುದ್ರೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಗೋವಿಂದ ರಾಜು, ಸಿ.ಎಂ.ಇಬ್ರಾಹಿಂ, ಅರವಿಂದಕುಮಾರ್ ಅರಳಿ, ಕೆ.ಹರೀಶ್‍ಕುಮಾರ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಹಾಗೂ ಎಸ್.ಎಲ್. ಧರ್ಮೇಗೌಡ ನಾಮಪತ್ರ ಸಲ್ಲಿಸಿದರು.

ಕಳೆದೊಂದು ವಾರದಿಂದ ಯಾವೊಂದು ನಾಮಪತ್ರವೂ ಸಲ್ಲಿಕೆಯಾಗಿರಲಿಲ್ಲ. ಕಡೆಯ ದಿನವಾಗಿದ್ದ ಇಂದು ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಜೆ. ಪುಟ್ಟಸ್ವಾಮಿ, ಎಂ.ಆರ್.ಸೀತಾರಾಮ್, ಮೋಟಮ್ಮ, ಡಿ.ಎಸ್. ವೀರಯ್ಯ, ಸಯ್ಯದ್ ಮುದೀರ್ ಆಘ, ಸೋಮಣ್ಣ ಬೇವಿನ ಮರದ, ರಘುನಾಥ್ ಮಲ್ಕಾಪುರೆ, ಭಾನುಪ್ರಕಾಶ್, ಸಿ.ಎಂ. ಇಬ್ರಾಹಿಂ, ಕೆ.ಗೋವಿಂದರಾಜು, ಬಿ.ಎಸ್.ಸುರೇಶ್ ಅವರು ಜೂ.17ರಂದು ನಿವೃತ್ತಿಯಾಗುತ್ತಿದ್ದು, ಇದರಿಂದ ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 11 ಸ್ಥಾನಗಳಿಗೆ ಅಷ್ಟೇ ಪ್ರಮಾಣದ ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ಉಮೇದು ವಾರರು ಅವಿರೋಧ ಆಯ್ಕೆಯಾಗುವುದು ಖಚಿತ.

Translate »