ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ 2023ಕ್ಕೆ ರಾಜ್ಯದಲ್ಲಿ ಜನತಾ ಸರ್ಕಾರ

ಬೆಂಗಳೂರು,ಸೆ.27(ಕೆಎಂಶಿ)-ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರು ಹೇಳಿದರು.
2023ಕ್ಕೆ ಜಾತ್ಯತೀತ ಜನತಾದಳ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿ ಯೊಂದಿಗೆ ಬಿಡದಿ ಫಾರ್ಮ್‍ಹೌಸ್‍ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.0’ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದರು.

ಅಪಮಾನಗಳನ್ನು ಸಹಿಸಿದ್ದೇನೆ, ಎದು ರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪ ಹಾಸ್ಯ ಮಾಡುವವರಿಗೆ 2023ರಲ್ಲಿ ಉತ್ತರ ನೀಡೋಣ ಎಂದರು.

ಇರುವುದು ಒಂದೇ ಪರಿಹಾರ, ಪ್ರಾದೇ ಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷ ವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾ ಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ. ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣಕ್ಕೆ ಇಳಿ ಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿ ಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡ ಲಾಗು ವುದು ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನ ಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸು ತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷ ವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದರು. ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.