ಡಿಸೆಂಬರ್ ಮೊದಲ ವಾರ ಭತ್ತ ಖರೀದಿ ಕೇಂದ್ರ ಆರಂಭ
ಮೈಸೂರು

ಡಿಸೆಂಬರ್ ಮೊದಲ ವಾರ ಭತ್ತ ಖರೀದಿ ಕೇಂದ್ರ ಆರಂಭ

November 21, 2018

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭತ್ತದ ಬೆಳೆ ಕಟಾವಿನ ಹಂತಕ್ಕೆ ತಲುಪಿರುವುದರಿಂದ ಡಿಸೆಂಬರ್ ಮೊದಲ ವಾರದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳ ಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಹಂತೇಶಪ್ಪ ತಿಳಿಸಿದ್ದಾರೆ.

ಮೈಸೂರು ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ ಅಧ್ಯಕ್ಷತೆ ಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಭತ್ತದ ಬೆಳೆ ಹಾಗೂ ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷ ಜಿ.ನಟರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಂತೇಶಪ್ಪ, ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಮುಂದಿನ ಒಂದು ವಾರದಲ್ಲಿ ಕಟಾವು ಆರಂಭವಾಗಲಿದೆ. ಇದರಿಂದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಭತ್ತದ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಖರೀದಿ ಕೇಂದ್ರಗಳ ತೆರೆಯುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರ ಈಗಾಗಲೇ ಭತ್ತಕ್ಕೆ 1750 ರೂ. ಬೆಂಬಲ ಬೆಲೆ ನಿಗದಿಗೊಳಿಸಿದ್ದು, ಖರೀದಿ ಕೇಂದ್ರಗಳ ಸ್ಥಾಪನೆಗೆ ಆದೇಶ ಹೊರಡಿಸಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಖರೀದಿ ಕೇಂದ್ರ ತೆರೆಯುವ ಪ್ರಕ್ರಿಯೆಗೆ ಒಳಪಡುವ ಎಲ್ಲಾ ಇಲಾಖೆ ಅಧಿಕಾರಿಗಳ ಸಮ್ಮುಖ ದಲ್ಲಿ ಮತ್ತೊಂದು ಸಭೆ ನಡೆಸಲಾಗುತ್ತದೆ. ಡಿಸೆಂಬರ್ ಮೊದಲ ವಾರದಲ್ಲಿ ಸರಕಾರದಿಂದ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದರು.

ನಂಜನಗೂಡು, ಕೆ.ಆರ್.ನಗರ, ತಿ.ನರಸೀಪುರ ತಾಲೂಕಿನಲ್ಲಿ ಭತ್ತವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲೆಲ್ಲಾ ಹೆಚ್ಚುವರಿ ಖರೀದಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಖಾಯಂ ಶಿಕ್ಷಕರನ್ನು

ನಿಯೋಜಿಸಿ: ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಶಿಕ್ಷಕರ ಕೊರತೆ ನೀಗಿಸಲು ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಶಾಲಾ ಅವಧಿ ಮುಕ್ತಾಯವಾಗುವ ಮುನ್ನವೇ ಬಸ್ ನಿಲ್ದಾಣಗಳಲ್ಲಿ ಬಸ್‍ಗಾಗಿ ಕಾಯುತ್ತಿ ರುತ್ತಾರೆ. ಇದಲ್ಲದೆ ಖಾಯಂ ಶಿಕ್ಷಕರು ಕೇವಲ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಮಕ್ಕಳ ಶಿಕ್ಷಣ ಮಟ್ಟ ಸುಧಾರಿಸು ವುದಾದರೂ ಹೇಗೆ? ಎಂದು ಜಿಪಂ ಸದಸ್ಯ ವೆಂಕಟಸ್ವಾಮಿ ಪ್ರಶ್ನಿಸಿದರು. ಇದಕ್ಕೆ ಡಿಡಿಪಿಐ ಮಮತಾ, ಸೂಕ್ತ ಕ್ರಮಕೈಗೊ ಳ್ಳುವುದಾಗಿ ತಿಳಿಸಿದರು.

ಅಧಿಕಾರಿಗಳು ಶಾಲೆಗಳನ್ನು ಪರಿಶೀಲಿ ಸುತ್ತಿಲ್ಲ: ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ಗಳು ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು. ಕೇಂದ್ರ ಸ್ಥಾನದಲ್ಲಿ ಕುಳಿತು ಶಾಲೆಗಳ ಮುಖ್ಯ ಶಿಕ್ಷಕರು ನೀಡಿದ ವರದಿಯನ್ನೇ ಸತ್ಯವೆಂದು ಪರಿಗಣಿಸಿದರೆ ಶಾಲೆಗಳ ನೈಜ ಸಮಸ್ಯೆ ಗಳು ತಿಳಿಯುವುದಿಲ್ಲ. ಡಿಡಿಪಿಐ ಹಾಗೂ ಸಿಇಓ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಸ್ತಿನ ಅಧಿಕಾರಿಗಳು ಎಂದು ಹೆಸರು ಪಡೆದರೆ ಸಾಲದು, ಅದು ಕೆಲಸದಲ್ಲಿಯೂ ಬಿಂಬಿತವಾಗಬೇಕು. ಸಾಕಷ್ಟು ಅಧಿಕಾರಿಗಳು ಜನಪ್ರತಿನಿಧಿಗಳ ಕರೆಯನ್ನೂ ಸ್ವೀಕರಿಸುವುದಿಲ್ಲ ಎಂದು ವೆಂಕಟಸ್ವಾಮಿ ಅಸಮಾಧಾನ ವ್ಯಕ್ತಪಡಿಸಿ ದರು. ಸಿಇಓ ಜ್ಯೋತಿ ಹಾಗೂ ಡಿಡಿಪಿಐ ಅವರು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಭವನಗಳಲ್ಲಿ ಶೌಚಾಲಯವೇ ಇಲ್ಲ: ಕೋಟ್ಯಾಂತರ ರೂ. ವೆಚ್ಚ ಮಾಡಿ ಹೋಬಳಿ, ತಾಲೂಕು ಕೇಂದ್ರಗಳಲ್ಲಿ ಸಮುದಾಯ ಭವನ, ಜಗಜೀವನ್‍ರಾಮ್ ಭವನಗ ಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿ ಶೌಚಾಲಯಗಳೇ ಇಲ್ಲವಾಗಿದೆ. ಬಹಳಷ್ಟು ಕಡೆ ಶೌಚಾಲಯ ನಿರ್ಮಿಸುವ ಮುನ್ನವೇ ಭವನಗಳನ್ನು ಉದ್ಘಾಟನೆ ಮಾಡಲಾಗಿದೆ. ಸಭೆ ಸಮಾರಂಭಗಳು ಜರುಗಿದ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸುವವರು ಶೌಚಾಲಯವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಯಾರು ಹೊಣೆ? ಎಂದು ಜಿಪಂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರೂ ಆದ ವೆಂಕಟ ಸ್ವಾಮಿ ಪ್ರಶ್ನಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಬಿಂದ್ಯಾ ಅವರು ಮಾತನಾಡಿ, ಹಿಂದೆ ಕಟ್ಟಿರುವ ಕಟ್ಟಡಗಳಲ್ಲಿ ಈ ಸಮಸ್ಯೆ ಉಂಟಾಗಿದೆ. ಕೆಲವು ಕಾರಣಗಳಿಂದ ಶೌಚಾಲಯ ನಿರ್ಮಿಸಿರಲಿಲ್ಲ. ಇದೀಗ ಶೌಚಾ ಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳ ಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಉತ್ತರಿಸಿದರು. ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ರಾಜಗೋಪಾಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Translate »