ಕೃಷಿ ತಿದ್ದುಪಡಿ ಕಾಯ್ದೆ ಹಿಂದಕ್ಕೆ: ಪ್ರತಿಕ್ರಿಯಿಸಲು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನಕಾರ
ಮೈಸೂರು

ಕೃಷಿ ತಿದ್ದುಪಡಿ ಕಾಯ್ದೆ ಹಿಂದಕ್ಕೆ: ಪ್ರತಿಕ್ರಿಯಿಸಲು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನಕಾರ

November 21, 2021

ಮೈಸೂರು, ನ.20(ಎಂಟಿವೈ)- ರೈತರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಕುರಿತು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿ ಸಲು ನಿರಾಕರಿಸಿದರು. ವಿಧಾನಪರಿಷತ್ ಚುನಾವಣೆ ಹಾಗೂ ಜನಸ್ವರಾಜ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ಮೈಸೂರಿಗೆ ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜೊತೆ ಸುದ್ದಿಗೋಷ್ಠಿ ಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸಚಿವದ್ವಯರು ಮಾತನಾಡಿದ ನಂತರ ಕೃಷಿ ಕಾಯ್ದೆಯ ಕುರಿತು ಪತ್ರಕರ್ತರು ಪ್ರತಿಕ್ರಿಯೆ ಕೇಳಿದಾಗ ಮಾತನಾಡಲು ನಿರಾಕರಿಸಿದರು. ಕೃಷಿ ಕಾಯ್ದೆಯ ಕುರಿತು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ನನ್ನ ಸಹಮತವಿದೆ. ನಾನು ಪ್ರತ್ಯೇಕವಾಗಿ ಹೇಳಿಕೆ ನೀಡಲು ಬಯಸುವುದಿಲ್ಲ ಎಂದು ಹೇಳುವ ಮೂಲಕ ಚಾಮರಾಜನಗರದತ್ತ ಪ್ರಯಾಣ ಬೆಳೆಸಿದರು.

Translate »