ಕೇಂದ್ರ ಬಜೆಟ್: ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ
ಮೈಸೂರು

ಕೇಂದ್ರ ಬಜೆಟ್: ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

January 21, 2021

ನವದೆಹಲಿ,ಜ.20-ಫೆಬ್ರವರಿ 1ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಜ.30ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಜ.30ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿ ದ್ದಾರೆ. ಬಜೆಟ್ ಅಧಿವೇಶನವು ಜ.29ರಿಂದ ಫೆಬ್ರವರಿ 15ರವರೆಗೆ ಮತ್ತು ಮಾ.8ರಿಂದ ಏ.8ರವರೆಗೆ ಎರಡು ಭಾಗಗಳಲ್ಲಿ ನಡೆಯಲಿದೆ. ಈ ವೇಳೆ ದೇಶದ ಮಹತ್ವದ ಕೇಂದ್ರ ಬಜೆಟ್ ಸಹ ಮಂಡನೆ ಯಾಗುತ್ತಿರುವುದು ವಿಶೇಷ. ಈ ವರ್ಷ ಭಾರತ ಆರ್ಥಿಕತೆ ಕೊರೊನಾ ಸಾಂಕ್ರಾಮಿಕ ವೈರಸ್‍ಗೆ ಸಿಲುಕಿ ಸಾಕಷ್ಟು ನಷ್ಟ ಅನುಭವಿಸಿದೆ. ದೇಶದ ಆರ್ಥಿಕತೆ ಐತಿಹಾಸಿಕ ದಾಖಲೆಯ ಮಟ್ಟಕ್ಕೆ ಕುಸಿತ ಕಂಡಿದೆ. ಇಂತಹ ಸಮಯದಲ್ಲಿ ಈ ವರ್ಷ ಬಜೆಟ್ ಮಂಡನೆಯಾಗುತ್ತಿರುವುದು ಆರ್ಥಿಕತೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಲ್ಲದೆ, ಈ ವರ್ಷದ ಬಜೆಟ್ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಮೂರನೇ ಪೂರ್ಣಾವಧಿ ಬಜೆಟ್ ಆಗಿರುವ ಕಾರಣ ಸಾಕಷ್ಟು ನಿರೀಕ್ಷೆಗಳೂ ಗರಿಗೆದರಿವೆ.

Translate »